ಉಡುಪಿ: ಪಿಎಂ ಕಿಸಾನ್ ಸಮ್ಮಾನ್ ಯೋಜನೆಯಡಿ ಉಡುಪಿಯ 1.5 ಲಕ್ಷ ರೈತರಿಗೆ ಅನುದಾನ
ಉಡುಪಿ: ಪಿಎಂ ಕಿಸಾನ್ ಸಮ್ಮಾನ್ ನಿಧಿಯೋಜನೆಯಡಿ ಜಿಲ್ಲೆಯಲ್ಲಿ 1,50,593 ರೈತರಿಗೆ, 258,99 ಕೋ.ರೂ. ಕೇಂದ್ರ ಸರಕಾರದ ಅನುದಾನ ಹಾಗೂ 127.24 ಕೋ. ರೂ. ರಾಜ್ಯ ಸರಕಾರದ ಅನುದಾನ ಬಿಡುಗಡೆ ಮಾಡಲಾಗಿದೆ. ಕೇಂದ್ರ ಸರಕಾರದ ಮಾರ್ಗಸೂಚಿಯಂತೆ ಈಯೋಜನೆಯ ಮುಂದಿನ ಕಂತು ಪಡೆಯಬೇಕಾದರೆ ಇಕೆವೈಸಿ ಕಡ್ಡಾಯವಾಗಿರುತ್ತದೆ ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.
ಕೇಂದ್ರ ಸರಕಾರದ ಅನುದಾನ ಹಾಗೂ 127.24 ಕೋ. ರೂ. ರಾಜ್ಯ ಸರಕಾರದ ಅನುದಾನ ಬಿಡುಗಡೆ ಮಾಡಲಾಗಿದೆ. ಕೇಂದ್ರ ಸರಕಾರದ ಮಾರ್ಗಸೂಚಿಯಂತೆ ಈ ಯೋಜನೆಯ ಮುಂದಿನ ಕಂತು ಪಡೆಯಬೇಕಾದರೆ KYC ಕಡ್ಡಾಯವಾಗಿರುತ್ತದೆ ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಈ ಯೋಜನೆಯ ನೆರವು ಪಡೆಯುತ್ತಿರುವ ಶೇ.72 ರಷ್ಟು ಅಂದರೆ 1,09,191 ರೈತರು ಮಾತ್ರ ಇ ಕೆವೈಸಿ ಮಾಡಿಸಿಕೊಂಡಿದ್ದಾರೆ. ಶೇ. 28ರಷ್ಟು ಅಂದರೆ 43,365 ರೈತರು ಇ- ಕೆವೈಸಿ ಮಾಡಿಸಿಕೊಂಡಿರುವುದಿಲ್ಲ.
ಆಧಾರ್ ಸಂಖ್ಯೆಯೊಂದಿಗೆ ಮೊಬೈಲ್ ಸಂಖ್ಯೆ ಜೋಡಿಸಿಕೊಂಡಿರುವ ರೈತರು https://pmkisan.gov.in
ವೆಬ್ ಸೈಟ್
ಭೇಟಿ ನೀಡಿ ಆಧಾರ್ನಂಬರ್, ಮೊಬೈಲ್ ಒಟಿಪಿ ದಾಖಲೆ KYC ಮಾಡಿಸಿಕೊಳ್ಳಬಹುದು .

Post a Comment