".

Header Ads

ಉಡುಪಿ: - ಅಕ್ರಮ ನೇಮಕಾತಿ 38 ಶಿಕ್ಷಕರ ಬಂಧನ


ಸಾರ್ವಜನಿಕ ಶಿಕ್ಷಣ ಇಲಾಖೆ 2012–15ನೇ ಸಾಲಿನಲ್ಲಿ ನಡೆಸಿದ ಸಹ ಶಿಕ್ಷಕರ ನೇಮಕಾತಿ ಅಕ್ರಮ ಪ್ರಕರಣದ ಬೆನ್ನುಹತ್ತಿರುವ ಸಿಐಡಿ ಅಧಿಕಾರಿಗಳು ಆರೋಪಿಗಳ ಪತ್ತೆಗಾಗಿ 30 ವಿಶೇಷ ತಂಡಗಳನ್ನು ರಚಿಸಿದ್ದು ,  ಜಿಲ್ಲೆಗಳಲ್ಲಿ ಏಕಕಾಲದಲ್ಲಿ 51 ಸ್ಥಳಗಳಲ್ಲಿ ದಾಳಿ ನಡೆಸಿ ಬುಧವಾರ ಬೆಳಿಗ್ಗೆ ಏಕಕಾಲದಲ್ಲಿ ದಾಳಿ ನಡೆಸಿ 38 ಸಹ ಶಿಕ್ಷಕರನ್ನು ಬಂಧಿಸಿದ್ದಾರೆ.

ಬೆಂಗಳೂರು ದಕ್ಷಿಣ ವಿಭಾಗದ 5, ಕೋಲಾರ ಜಿಲ್ಲೆಯ 24,  ಚಿಕ್ಕಬಳ್ಳಾಪುರ ಜಿಲ್ಲೆಯ 3 ಹಾಗೂ ಚಿತ್ರದುರ್ಗ ಜಿಲ್ಲೆಯ 5 ಸಹ ಶಿಕ್ಷಕರು ಸೇರಿದಂತೆ ಒಟ್ಟು 38 ಶಿಕ್ಷಕರನ್ನು ಬಂಧಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ರಾಜ್ಯದ ಬಹುತೇಕ ಜಿಲ್ಲೆಗಳ ವ್ಯಾಪ್ತಿಯಲ್ಲಿ ನಡೆದಿದ್ದ ನೇಮಕಾತಿಯಲ್ಲಿ ಅಕ್ರಮ ನಡೆದಿರುವ ಕುರಿತು ವಿಧಾನಸೌಧ ಠಾಣೆಯಲ್ಲಿ ಕಳೆದ ಆಗಸ್ಟ್ನಲ್ಲಿ ಪ್ರಕರಣ ದಾಖಲಾಗಿತ್ತು. 



Powered by Blogger.