".

Header Ads

ದೀಪಾವಳಿ : ಪಟಾಕಿ ಸಿಡಿಸಲು ಸಮಯ ನಿಗದಿ



ರಾಜ್ಯದಲ್ಲಿ ಅ. 24 ರಿಂದ 26ರವರೆಗೆ ದೀಪಾವಳಿ ಹಬ್ಬ ಆಚರಣೆ ಮಾಡಲಾಗುತ್ತಿದ್ದು, ಹಬ್ಬದ ವೇಳೆ 10ರವರೆಗೆ (2 ಗಂಟೆ) ಮಾತ್ರ ಪಟಾಕಿ ಸಿಡಿಸಲು ಅವಕಾಶ ನೀಡಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಎಸ್‌ಪಿಸಿಬಿ) ಸುತ್ತೋಲೆ ಹೊರಡಿಸಿದೆ.

ಇದೇ ವೇಳೆ ಸುಪ್ರೀಂ ಕೋರ್ಟ್‌ ನೀಡಿದ ನಿರ್ದೇಶನ ಪಾಲಿಸುವಂತೆ ಮಂಡಳಿ ಸೂಚಿಸಿದೆ. ಈ ವಿಚಾರವಾಗಿ ಆಯಾ ಜಿಲ್ಲಾಧಿಕಾರಿಗಳು, ನಗರ ಪೊಲೀಸ್‌ ಆಯುಕ್ತರು, ಅಗ್ನಿಶಾಮಕ, ತುರ್ತು ಸೇವೆಗಳ ಇಲಾಖೆ, ಆರೋಗ್ಯ ಇಲಾಖೆ ಹಾಗೂ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಆಯುಕ್ತರಿಗೆ ಸುತ್ತೋಲೆ ಹೊರಡಿಸಲಾಗಿದೆ.

ನಿತ್ಯ ರಾತ್ರಿ 8ರಿಂದ ರಾತ್ರಿ 10ರ ಒಳಗಾಗಿ ಪಟಾಕಿ ಸಿಡಿಸಬೇಕು. ಉಳಿದ ಸಮಯದಲ್ಲಿ ಪಟಾಕಿ ಸಿಡಿಸುವುದನ್ನು ನಿಷೇಧಿಸಲಾಗಿದೆ. ಒಂದು ವೇಳೆ ನಿಷೇಧಿತ ಅವಧಿಯಲ್ಲಿ ಪಟಾಕಿ ಸಿಡಿಸುವುದು ಅಥವಾ ಮಾರಾಟ ಮಾಡಿದರೆ ಅಂಥವರ ವಿರುದ್ಧ ಕ್ರಮ ಜರುಗಿಸಲಾಗುತ್ತದೆ. ಅಲ್ಲದೆ, ಪಟಾಕಿ ಸಿಡಿಸುವವರು ಘನತ್ಯಾಜ್ಯ ವಿಲೇವಾರಿಗೆ ಕ್ರಮಕೈಗೊಳ್ಳಬೇಕು ಎಂದು ಕಟ್ಟುನಿಟ್ಟಾಗಿ ಸೂಚಿಸಲಾಗಿದೆ.




Powered by Blogger.