".

Header Ads

ಗಂಧದ ಗುಡಿ ಟ್ರೈಲರ್

 


ಬೆಂಗಳೂರು : ಪಿಆರ್‌ಕೆ ಸ್ಟುಡಿಯೋ ಗಂಧದ ಗುಡಿ ಟ್ರೈಲರ್ ಬಿಡುಗಡೆ ಮಾಡಿದ್ದು, ಕರ್ನಾಟಕ ರತ್ನ ಪುನೀತ್‌ ರಾಜ್‌ಕುಮಾರ್ ತಾವೇ ಸ್ವತಃ ಮುತುವರ್ಜಿ ವಹಿಸಿ ಮಾಡಿರುವ ಸಾಕ್ಷ್ಯಾಚಿತ್ರ 'ಗಂಧದ ಗುಡಿ'ಗೆ ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಬೊಮ್ಮಾಯಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಟ್ರೈಲರ್ ಬಿಡುಗಡೆಯಾದ ಮೇಲೆ ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಟ್ರೈಲರ್‌ ಕುರಿತು ಅಶ್ವಿನಿ ಪುನೀತ್‌ ರಾಜ್‌ಕುಮಾರ್‌ ತಿಳಿಸಿದ್ದರು.

ಜಗತ್ತಿನಾದ್ಯಂತ ಲಕ್ಷಾಂತರ ಹೃದಯಗಳಲ್ಲಿ ಪುನೀತ್ ರಾಜ್ ಕುಮಾರ್ ನೆಲೆಸಿದ್ದಾರೆ. ಇದು ಗಂಧದ ಗುಡಿ ಪ್ರಕೃತಿ ಮಾತೆಗೆ, ಕರ್ನಾಟಕದ ನೈಸರ್ಗಿಕ ಸೌಂದರ್ಯ ಹಾಗು ಪರಿಸರ ಸಂರಕ್ಷಣೆಗೆ ಸಲ್ಲಿಸಲಾದ ಗೌರವ. ಈ ಪ್ರಯತ್ನಕ್ಕೆ ನನ್ನ ಶುಭ ಹಾರೈಕೆಗಳು" ಎಂದು  ಪ್ರಧಾನಿ ನರೇಂದ್ರ ಮೋದಿ,  ಟ್ವೀಟ್ ಮಾಡಿದರೆ,  "ಗಂಧದಗುಡಿ ಕರ್ನಾಟಕದ ಆಸ್ತಿ, ಅಪ್ಪು ಗಂಧದಗುಡಿಯ ಆಸ್ತಿ. ಗಂಧದ ಗುಡಿ ನಮ್ಮನ್ನೆಲ್ಲ ಹೊಸತೊಂದು ಲೋಕಕ್ಕೆ ಕರೆದೊಯ್ಯಲಿದೆ ಎಂಬ ಭರವಸೆ ಟ್ರೇಲರ್‌ನಲ್ಲಿ ಕಾಣುತ್ತದೆ. ಅಶ್ವಿನ್ ಪುನೀತ್ ರಾಜ್‌ಕುಮಾರ್ ಅವರಿಗೆ ನನ್ನ ಅಭಿನಂದನೆಗಳು" ಎಂಬುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ  ಟ್ವೀಟ್ ಮಾಡಿ ಅಭಿನಂದನೆ ಸಲ್ಲಿಸಿದ್ದಾರೆ

Powered by Blogger.