ಉಡುಪಿ: ಸೋದೆ ಶ್ರೀ ವಾದಿರಾಜ ಮಠದ ವತಿಯಿಂದ ಮಟ್ಟುಗುಳ್ಳ ಬೆಳೆಗೆ ಚಾಲನೆ
ಔಷಧೀಯ ಗುಣವುಳ್ಳ ಈ ಮಟ್ಟು ಗುಳ್ಳವನ ಪ್ರಸ್ತುತ ಸಂದರ್ಭದಲ್ಲಿ ಮಟ್ಟುಗುಳ್ಳ ಬೆಳೆಗಾರರಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಸೋದೆ ಶ್ರೀ ವಾದಿರಾಜ ಮಠದ ಪೀಠಾಧಿಪತಿಗಳಾದ ಶ್ರೀ ವಿಶ್ವವಲ್ಲಭ ತೀರ್ಥ ಶ್ರೀಪಾದರು ಶ್ರೀ ಮಠದ ವತಿಯಿಂದ ಮಟ್ಟುಗುಳ್ಳ ಕೃಷಿ ಮಾಡಲು ಯೋಜಿಸಿದ್ದಾರೆ. ಸ್ವತಃ ತಾವು ಗ್ರಾಮಕ್ಕೆ ಆಗಮಿಸಿ, ಮಟ್ಟು ಗ್ರಾಮದ ನಾಗಪಾತ್ರಿ ಲಕ್ಷ್ಮಣ ರಾಯರ ಗದ್ದೆಯಲ್ಲಿ ಮಟ್ಟುಗುಳ್ಳದ ಸಸಿಯನ್ನು ನೆಟ್ಟು ಪ್ರಸಕ್ತ 2022 ನೇ ಸಾಲಿನ ಗುಳ್ಳದ ಬೆಳೆಗೆ ಚಾಲನೆ ನೀಡಿದರು. ಈ ಕಾರ್ಯಕ್ರಮದಲ್ಲಿ ಶ್ರೀ ಪಾದರೊಂದಿಗೆ ಮಠದ ದಿವಾನರಾದ ಪಾಡಿಗಾರು ಶ್ರೀನಿವಾಸ ತಂಥ್ರೀ, ಸೋದೆ ವಾದಿರಾಜ ಮಠ ಎಜುಕೇಶನ್ ಟ್ರಸ್ಟಿನ ಕಾರ್ಯದರ್ಶಿಗಳಾ ದ ರತ್ನಕುಮಾರವರು, ಮಟ್ಟುಗುಳ್ಳ ಬೆಳೆಗಾರರ ಸಂಘದ ಪದಾಧಿಕಾರಿಗಳು ,ಮಟ್ಟು ವಲಯ ಬ್ರಾಹ್ಮಣ ಸಂಘದ ಅಧ್ಯಕ್ಷರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.

Post a Comment