ಉಡುಪಿ: ಚಿಕ್ಕಮಗಳೂರು ದತ್ತಪೀಠ ಹೋಮ ಮಾಡೋ ಜಾಗದಲ್ಲಿ ಮತ್ತೆ ಮಾಂಸ ಬೇಯಿಸಿರುವ ವೀಡಿಯೋ ವೈರಲ್
ಚಿಕ್ಕಮಗಳೂರು ವರದಿ: ತಾಲೂಕಿನಲ್ಲಿ ಹಿಂದೂ – ಹಿಂದೂಪರ ಸಂಘಟನೆ ಕಾರ್ಯಕರ್ತರು ಸರ್ಕಾರ ಹಾಗೂ ಜಿಲ್ಲಾಡಳಿತದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ, ಮುಸ್ಲಿಮರ ಧಾರ್ಮಿಕ ಭಾವೈಕ್ಯದ ಕೇಂದ್ರವಾಗಿರುವ ದತ್ತಾತ್ರೇಯ ಬಾಬಾಬುಡನ್ ಗಿರಿ ದರ್ಗಾದಲ್ಲಿ ಪ್ರವಾಸಿಗರು ಮತ್ತೆ ಮಾಂಸ ಬೇಯಿಸಿರುವ ವೀಡಿಯೋ ವೈರಲ್ ಆಗಿದ್ದು, ಕಳೆದ ತಿಂಗಳ ಹಿಂದೆಯೂ ದತ್ತಪೀಠದಲ್ಲಿ ಮಾಂಸಹಾರ ತಯಾರಿಸಿ ಸೇವಿಸಿದ್ದರು. ಆಗಲೂ ಹಿಂದೂ ಪರ ಸಂಘಟನೆ ಕಾರ್ಯಕರ್ತರು ಜಿಲ್ಲಾಡಳಿತಕ್ಕೆ ದೂರು ನೀಡಿದ್ದರು. ಆಗ ಜಿಲ್ಲಾಡಳಿತ ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದು ಭರವಸೆ ನೀಡಿತ್ತು. ಇದೀಗ ದತ್ತಪೀಠಕ್ಕೆ ಬರುವ ಪ್ರವಾಸಿಗರು ದತ್ತ ಮಾಲಾಧಾರಣೆ ಹಾಗೂ ದತ್ತ ಜಯಂತಿಯ ವೇಳೆ ಹಿಂದೂ ಸಂಘಟನೆಗಳು ಹೋಮ- ಹವನ ನಡೆಸಲು ಸರ್ಕಾರವೇ ನಿರ್ಮಿಸಿರುವ ತಾತ್ಕಾಲಿಕ ಶೆಡ್ ನಲ್ಲಿ ಪುನಃ ಇದೇ ರೀತಿಯಾಗಿದೆ ಇದು ಕೊನೆಯಾಗಬೇಕು. ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿರುವ ಹಿಂದೂ ಬ್ರಿಗೇಡ್ ಕಾರ್ಯಕರ್ತರು ಇನ್ಮುಂದೆ ಇಂತಹ ಘಟನೆ ನಡೆಯದಂತೆ ಜಿಲ್ಲಾಡಳಿತ ಸೂಕ್ತ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ನಾವೇ ಸೂಕ್ತ ತಕ್ಕ ಪಾಠ ಕಲಿಸುತ್ತೇವೆ ಎಂದು ಯುವ ಬ್ರಿಗೇಡ್ ಸಂಚಾಲಕ ಪ್ರವೀಣ್ ಖಾಂಡ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

Post a Comment