ಉಡುಪಿ : ಕುಂಬಳೆಯ ಅನಂತ ಪದ್ಮನಾಭ ದೇವಸ್ಥಾನದ ದೇವರ ಮೊಸಳೆ ಇನ್ನಿಲ್ಲ
![]() |
ಮಂಗಳೂರು ಗಡಿಭಾಗದ ಕೇರಳದ ಕಾಸರಗೋಡು ಜಿಲ್ಲೆಯ ಕುಂಬಳೆಯ ಅನಂತ ಪದ್ಮನಾಭ ದೇವಸ್ಥಾನದ ‘ಬಬಿಯಾ’ ಹೆಸರಿನ ಮೊಸಳೆ ಇಹಲೋಕ ತ್ಯಜಿಸಿದೆ. ಸ್ವಾಮಿಯ ಮೂಲ ಕ್ಷೇತ್ರ ಎನ್ನಲಾದಕುಂಬಳೆ ಅನಂತ ಪದ್ಮನಾಭ ದೇವಸ್ಥಾನದಲ್ಲಿರುವ ಸಸ್ಯಹಾರಿ ಮೊಸಳೆ ಎಂದೇ ಬಬಿಯಾ ಪ್ರಖ್ಯಾತಿ ಪಡೆದಿತ್ತು. ಬಬಿಯಾ ಕಳೆದ 70 ವರ್ಷಗಳಿಂದ ದೇವಸ್ಥಾನದಲ್ಲಿದೆ ಎನ್ನಲಾಗಿದೆ.ನಿತ್ಯ ಎರಡು ಬಾರಿ ಪೂಜೆ ಬಳಿಕ ನೈವೇದ್ಯ ಸ್ವೀಕರಿಸುತ್ತಿತ್ತು. ದೇವರ ಮೊಸಳೆ ಎಂದೇ ಇದು ಪ್ರಖ್ಯಾತಿ ಪಡೆದಿತ್ತು. ಎರಡು ವರ್ಷಗಳ ಹಿಂದೆ ನೀರಿನಿಂದ ಹೊರ ಬಂದು ದೇಗುಲ ಪ್ರವೇಶಿಸಿದ್ದ ಬಬಿಯಾ, ಮೊದಲ ಬಾರಿಗೆ ದೇಗುಲದ ಆವರಣಕ್ಕೆ ಬಂದಿದ್ದು ಭಕ್ತರ ಅಚ್ಚರಿಗೆ ಕಾರಣವಾಗಿತ್ತು.



Post a Comment