".

Header Ads

ಉಡುಪಿ: ಕಾಲೇಜು ಅತಿಥಿ ಉಪನ್ಯಾಸಕರಿಗೆ ಗೌರವಧನ ಬಿಡುಗಡೆ !


 


ಸರಕಾರಿ ಪದವಿ ಕಾಲೇಜಿನಲ್ಲಿ 2021-22ನೇ ಸಾಲಿಗೆ ನೇಮಕಗೊಂಡು ಕರ್ತವ್ಯ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕರಿಗೆ ಸೆಪ್ಟಂಬರ್ ಹಾಗೂ ಅಕ್ಟೋಬರ್ ತಿಂಗಳ ಗೌರವಧನ ಪಾವತಿಗೆ ಅನುದಾನ ಬಿಡುಗಡೆ ಮಾಡಲಾಗಿದೆ. ಪ್ರಾದೇಶಿಕ ಜಂಟಿ ನಿರ್ದೇಶಕರ ಕಚೇರಿ ಯಿಂದ ಅನುಮೋದನೆ ಗೊಂಡಿರುವ ಅಭ್ಯರ್ಥಿಗಳಿಗೆ ಮಾತ್ರ ಗೌರವಧನ ನೀಡಬೇಕು. 

ಅನುಮೋದನೆ ಪಡೆಯದೆ ಗೌರವಧನ ನೀಡಿದಲ್ಲಿ ಸಂಬಂಧಪಟ್ಟ ಕಾಲೇಜಿನ ಪ್ರಾಂಶುಪಾಲರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು. 

ಕಾಲೇಜಿನ ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ, ಸೆಪ್ಟಂಬರ್ ಹಾಗೂ ಅಕ್ಟೋಬರ್ ತಿಂಗಳಿಗೆ ಮಾತ್ರ ಪಾವತಿಸಲು ಅನುದಾನ ಬಿಡುಗಡೆ ಮಾಡಲಾಗಿದೆ. ಕಡ್ಡಾಯವಾಗಿ ನಿರ್ದಿಷ್ಟ ತಿಂಗಳ ಗೌರವಧನ ಶೀಘ್ರ ಪಾವತಿಸಬೇಕು. ವಿಳಂಬ ಮಾಡುವುದು ಅಥವಾ ತಮ್ಮಲ್ಲೇ ಅನುದಾನ ಉಳಿಸಿಕೊಳ್ಳುವುದನ್ನು ಮಾಡಬಾರದು ಎಂದು ಪ್ರಾಂಶುಪಾಲರಿಗೆ ಇಲಾಖೆ ತಿಳಿಸಿದೆ.

 ಉಡುಪಿ, ದಕ್ಷಿಣ ಕನ್ನಡ ಹಾಗೂ ಕೊಡಗು ಸೇರಿದಂತೆ ಮಂಗಳೂರು ವಿಭಾಗದ 37 ಸರಕಾರಿ ಪದವಿ ಕಾಲೇಜಿನಲ್ಲಿ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕರಿಗೆ ಗೌರವಧನಕ್ಕಾಗಿ 3.19 ಕೋ.ರೂ. ಅನುದಾನದ ಆವಶ್ಯಕತೆ ಇದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.

Powered by Blogger.