ಕಾಸರಗೋಡು ಜಿಲ್ಲೆ ಉಪ್ಪಳ ಸಮೀಪದ ಬೇಕೂರು ಸರ್ಕಾರಿ ಹೈಯರ್ ಸೆಕೆಂಡರಿ ಸ್ಕೂಲ್ ಆವರಣದಲ್ಲಿ ಇಂದು ಚಪ್ಪರ ಕುಸಿದುಬಿದ್ದು ದೊಡ್ಡ ಅನಾಹುತ ಸಂಭವಿಸಿದೆ.
ಪ್ರಾಥಮಿಕ ವರದಿ ಪ್ರಕಾರ, 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.
ಕಾಸರಗೋಡು ಜಿಲ್ಲೆ ಉಪ್ಪಳ ಸಮೀಪದ ಬೇಕೂರು ಸರ್ಕಾರಿ ಶಾಲೆಯಲ್ಲಿ ಇಂದು ಅಂದರೆ ಶುಕ್ರವಾರ ಮಂಜೇಶ್ವರ ಉಪಜಿಲ್ಲಾ ವಿಜ್ಞಾನ ಮೇಳ ನಡೆಯುತ್ತಿತ್ತು. ಈ ಕಾರ್ಯಕ್ರಮಕ್ಕಾಗಿ ತಾತ್ಕಾಲಿಕವಾಗಿ ಶೀಟ್ ಹೊದಿಸಿ ಹಾಕಿದ್ದ ಪೆಂಡಾಲ್ ಮಧ್ಯಾಹ್ನ ಸಂಪೂರ್ಣವಾಗಿ ಕುಸಿದು ಬಿದ್ದು ದೊಡ್ಡ ಅನಾಹುತ ಸಂಭವಿಸಿತು. ಮಂಜೇಶ್ವರ ಉಪಜಿಲ್ಲಾ ಮಟ್ಟದ ಕಾರ್ಯಕ್ರಮವಾದ ಕಾರಣ ವಿವಿಧ ಶಾಲೆಗಳಿಂದ ಆಯ್ದ ವಿದ್ಯಾರ್ಥಿಗಳು ಈ ಕಾರ್ಯಕ್ರಮಕ್ಕೆ ಆಗಮಿಸಿದ್ದರು.
ಎಲ್ಲರೂ ಈ ಚಪ್ಪರದ ಅಡಿಯಲ್ಲಿ ಇದ್ದರು. ಕೆಲವು ಕುಳಿತುಕೊಂಡಿದ್ದರು. ಅನಾಹುತವಾದಾಗ ಸ್ಥಳದಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ಸಂಘಟಕರು ಕೂಡಲೇ ತುರ್ತು ರಕ್ಷಣಾ ಕಾರ್ಯ ಮತ್ತು ಪರಿಹಾರ ಕಾರ್ಯಾಚರಣೆಗೆ ತೊಡಗಿದ್ದರಲ್ಲದೆ, ಸ್ಥಳೀಯಾಡಳಿತದ ನೆರವನ್ನೂ ಪಡೆದಿದ್ದರು. ಅಲ್ಲಿದ್ದವರೇ ಶೀಟ್‌ಗಳನ್ನು ಸರಿಸಿ, ಅಡಿಯಲ್ಲಿ ಸಿಲುಕಿದ್ದ ವಿದ್ಯಾರ್ಥಿಗಳನ್ನು ರಕ್ಷಿಸಿದ್ದಾರೆ.
ಶೀಟ್‌ಗಳನ್ನು ಬದಿಗೆ ಸರಿಸಿ ಗಾಯಗೊಂಡ ವಿದ್ಯಾರ್ಥಿಗಳು ಮತ್ತು ಇತರರನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಲಾಗಿದೆ. ಪ್ರಾಣ ಹಾನಿ ಸಂಭವಿಸಿದ ಬಗ್ಗೆ ವರದಿ ಇಲ್ಲ. ಮಂಜೇಶ್ವರ ಉಪಜಿಲ್ಲಾ ವಿಜ್ಞಾನ ಮೇಳ ನಿನ್ನೆ ಮತ್ತು ಇಂದು ಆಯೋಜನೆ ಆಗಿತ್ತು. ಗಂಭೀರ ಗಾಯಗೊಂಡ ಕೆಲವು ವಿದ್ಯಾರ್ಥಿಗಳನ್ನು ಮಂಗಳೂರಿನ ಆಸ್ಪತ್ರೆಗೆ ಸಾಗಿಸಲಾಗಿದೆ.
join our whatsapp group
ಉಡುಪಿ ನ್ಯೂಸ್ ನಲ್ಲಿ ಜಾಹೀರಾತುಗಾಗಿ ಸಂಪರ್ಕಿಸಿ : ವಾಟ್ಸಪ್ ನಂಬರ್:- 8217755156
Post a Comment