ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜ್ಞಾನ ವಿಕಾಸ ಸಮನ್ವಯ ಅಧಿಕಾರಿ ಮೆದುಳಿನ ನರ ದೌರ್ಬಲ್ಯದಿಂದ ಮೃತ್ಯು..
ದೇವರಾಜ್ ದಂಪತಿಗಳ ಐವರ ಪುತ್ರಿಯರಲ್ಲಿ ಕೊನೆಯವಳಾದ ಶಿಲ್ಪಾರವರು ಮನೆಗೆ ಆಧಾರವಾಗಿದ್ದರು , ಕಳೆದ ಹಲವು ವರ್ಷಗಳಿಂದ ಶ್ರೀಕ್ಷೇತ್ರ ಧರ್ಮಸ್ಥಳದ ಗ್ರಾಮಾಭಿವೃದ್ಧಿ ಯೋಜನೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಕಡಬ ವಿಕಾಸ ಸಮನ್ವಯ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.ಕಳೆದ 9 ತಿಂಗಳಿನಿಂದ. ಮೆದುಳಿನ ನರ ದೌರ್ಬಲ್ಯಕ್ಕೆ ತುತ್ತಾಗಿ ಚಿಕಿತ್ಸೆ ಪಡೆಯುತ್ತಿದ್ದರು.ಇವರ ಚಿಕಿತ್ಸೆಗಾಗಿ ಹಲವು ಸಂಘ-ಸಂಸ್ಥೆಯವರು ಸ್ವಯಂ ಪ್ರೇರಣೆಯಿಂದ ಸಹಾಯ ಮಾಡಿದ್ದರು. ಅಕ್ಟೋಬರ್ 20ರ ಸಂಜೆ ಚಿಕಿತ್ಸೆ ಫಲಕಾರಿಯಾಗದೆ ಬೆಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.



Post a Comment