ಸುದ್ದಿ : ಬಸ್ ಹತ್ತುವಾಗ ಆಯತಪ್ಪಿ ವಿದ್ಯಾರ್ಥಿನಿಗೆ ಅಪಘಾತ
ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಆವರಣದಲ್ಲಿ ಶಿಲ್ಪಾ ಎಂಬ ವಿದ್ಯಾರ್ಥಿನಿ ಬಿಎಂಟಿಸಿ ಬಸ್ ಹತ್ತುವಾಗ ಆಯತಪ್ಪಿ ಕೆಳಗೆ ಬಿದ್ದು, ಆಕೆಯ ಸೊಂಟದ ಮೇಲೆ ಬಸ್ ಹರಿದು ಗಾಯಗೊಂಡ ಘಟನೆ ನಡೆದಿದೆ.
ಈ ಘಟನೆಗೆ ಸಂಬಂಧಿಸಿದಂತೆ ಬಿಎಂಟಿಸಿ ಬಸ್ ಚಾಲಕನನ್ನು ಕಾಮಾಕ್ಷಿಪಾಳ್ಯ ಪೊಲೀಸರು ಬಂಧಿಸಿದ್ದಾರೆ.
ಬಸ್ ನಿಲ್ಲಿಸದೆ ಬಸ್ ಚಾಲಕ ನಿರ್ಲಕ್ಷ್ಯ ಮಾಡಿದ್ದಾನೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ. ಶಿಲ್ಪಾ ಗೆಳತಿ ರಾಧಿಕಾ ಎಂಬುವರು ನೀಡಿದ ದೂರಿನ ಮೇರೆಗೆ ಪೊಲೀಸರು ಕ್ರಮ ಕೈಗೊಂಡು ಚಾಲಕ ಸುರೇಶ್ ಎಂಬಾತನನ್ನು ಬಂಧಿಸಿದ್ದಾರೆ.
Post a Comment