".

Header Ads

ಉಡುಪಿ; ನ. 21ರಿಂದ ಭತ್ತ ಖರೀದಿಗೆ ನೋಂದಣಿ ಕೇಂದ್ರ ಆರಂಭ !

 


ಉಡುಪಿ ಜಿಲ್ಲೆಯಲ್ಲಿ ಭತ್ತ ಬೆಳೆದಿರುವ ರೈತರಿಗೆ ಜಿಲ್ಲಾಡಳಿತ ಸಿಹಿಸುದ್ದಿ ನೀಡಿದೆ. ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಭತ್ತವನ್ನು ಖರೀದಿ ಮಾಡಲಾಗುತ್ತದೆ. ಆದರೆ ಇದಕ್ಕೆ ಮೊದಲು ರೈತರು ನೋಂದಣಿ ಮಾಡಿಸಬೇಕಿದೆ.
 ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಟಾಸ್ಕ್ ಪೋರ್ಸ್ ಸಮಿತಿ ಸಭೆಯಲ್ಲಿ ಅವರು ಮಾತನಾಡಿದ 
ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ   ಪ್ರಸಕ್ತ ಮುಂಗಾರು ಋತುವಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ , ಜಿಲ್ಲೆಯ ರೈತರಿಂದ ಸ್ಥಳೀಯವಾಗಿ ಬೆಳದಿರುವ ಭತ್ತವನ್ನು ಖರೀದಿಸಲು ಜಿಲ್ಲೆಯಲ್ಲಿ ನವೆಂಬರ್ 21 ರಿಂದ ನೋಂದಣಿ ಕೇಂದ್ರಗಳನ್ನು ತರೆದು, ನೋಂದಣಿ  ಉಡುಪಿ ಜಿಲ್ಲೆಯಲ್ಲಿ ಭತ್ತ ಬೆಳೆದಿರುವ ರೈತರಿಗೆ ಜಿಲ್ಲಾಡಳಿತ ಸಿಹಿಸುದ್ದಿ ನೀಡಿದೆ. ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಭತ್ತವನ್ನು ಖರೀದಿ ಮಾಡಲಾಗುತ್ತದೆ. ಆದರೆ ಇದಕ್ಕೆ ಮೊದಲು ರೈತರು ನೋಂದಣಿ ಮಾಡಿಸಬೇಕಿದೆ. ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಈ ಕುರಿತು ಮಾಹಿತಿ ನೀಡಿದರು. 

 ಉಡುಪಿ ಜಿಲ್ಲೆಯಲ್ಲಿ ಸ್ಥಳೀಯವಾಗಿ ಬೆಳೆಯುವ ಕಜೆ, ಜಯ, ಜ್ಯೋತಿ, ಪಂಚಮುಖಿ, ಸಹ್ಯಾದ್ರಿ, ಉಷಾ, ಅಭಿಲಾಷ ಮತ್ತು ಎಂಓ4 ತಳಿಯ ಭತ್ತಕ್ಕೆ ಬೆಂಬಲ ಬೆಲೆಯನ್ನು ಘೋಷಣೆ ಮಾಡಲಾಗಿದೆ. ಸಾಮಾನ್ಯ ಭತ್ತಕ್ಕೆ ರೂ. 2540 ದರವನ್ನು ನಿಗದಿಪಡಿಸಲಾಗಿದೆ.

 ಜಿಲ್ಲೆಯಾದ್ಯಂತ ರೈತರಿಗೆ ಅನುಕೂಲ ಆಗುವಂತೆ 10 ಕಡೆಗಳಲ್ಲಿ ಭತ್ತ ನೋಂದಣಿ ಕೇಂದ್ರಗಳನ್ನು ಹಾಗೂ 7 ಕಡೆಗಳಲ್ಲಿ ಭತ್ತ ಖರೀದಿ ಕೇಂದ್ರಗಳನ್ನು ತೆರೆಯುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದ್ದಾರೆ.ಭತ್ತವನ್ನು ಮಾರಾಟ ಮಾಡಬೇಕಾದ ರೈತರು ಈಗಾಗಲೇ ಪ್ರೂಟ್ಸ್ ತಂತ್ರಾಂಶದಲ್ಲಿ ನೋಂದಣಿಯಾಗಿರಬೇಕು. ಒಂದು ವೇಳೆ ರೈತರು ನೋಂದಣಿ ಮಾಡದಿದ್ದಲ್ಲಿ ಪ್ರೂಟ್ಸ್ ತಂತ್ರಾಂಶದಲ್ಲಿ ನೋಂದಣಿ ಮಾಡಿಕೊಂಡು ತಾವು ಬೆಳದ ಭತ್ತವನ್ನು ಖರೀದಿ ಕೇಂದ್ರಗಳಲ್ಲಿ ಮಾರಾಟ ಮಾಡಬಹುದಾಗಿದೆ.

 ಖರೀದಿ ಕೇಂದ್ರಗಳಲ್ಲಿ ರೈತರಿಂದ ಖರೀದಿ ಮಾಡಿದ ಭತ್ತದ ಮೊತ್ತವನ್ನು ನೇರವಾಗಿ ರೈತರ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗುತ್ತದೆ. ಮಾರಾಟ ಸಮಯದಲ್ಲಿ ರೈತರು ಆಧಾರ್ ಸಂಖ್ಯೆಗೆ ಜೋಡಣೆಯಾದ ತಮ್ಮ ಬ್ಯಾಂಕ್ ಖಾತೆಯ ವಿವರಗಳನ್ನು ನೀಡಬೇಕಿದೆ.








Powered by Blogger.