".

Header Ads

ಮಾಹಿತಿ ಸುದ್ದಿ:- ಕರ್ನಾಟಕದ 32 ಲಕ್ಷ ರೈತರಿಗೆ 24 ಸಾವಿರ ಕೋಟಿ ರೂ.ಸಾಲ: ಸಿಎಂ ಬೊಮ್ಮಾಯಿ


ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿಯಮಿತ ಬೆಂಗಳೂರು, ಕಲಬುರಗಿ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನಿಯಮಿತ, ವಿವಿಧ ಸಹಕಾರ ಸಂಘಗಳ ಸಹಯೋಗದೊಂದಿಗೆ ಜಿಲ್ಲೆಯ ಸೇಡಂ ತಾಲೂಕಿನಲ್ಲಿ ಆಯೋಜಿಸಿದ್ದ '69ನೇ ಅಖಿಲ ಭಾರತ ಸಹಕಾರ ಸಪ್ತಾಹ- 2022' ಉದ್ಘಾಟಿಸಿ ಮಾತನಾಡಿದವರು.  ಕೃಷಿಯಲ್ಲಿ ಬಂಡವಾಳ ಹೂಡಿಕೆ ಹೆಚ್ಚಾದರೆ ರೈತರ ಆದಾಯವೂ ಹೆಚ್ಚುತ್ತದೆ. ಆಗ ರೈತರು ಸ್ವಾಭಿಮಾನದ ಬದುಕು ಕಟ್ಟಿಕೊಳ್ಳಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಒಂದು ಹೆಕ್ಟೇರಿಗೆ ನೀಡುವ ಸಾಲದ ಮೊತ್ತಕ್ಕೆ ಆರ್ಥಿಕ ಮಾಪನವನ್ನು ಸಹಕಾರ ಸಂಘಗಳೇ ತೀರ್ಮಾನಿಸಬೇಕು. ಆಗ ಮಾತ್ರ ರೈತರು ಮೀಟರ್ ಬಡ್ಡಿಯ ಸುಳಿಗೆ ಸಿಲುಕದೇ ಅವರ ಬಾಳು ಹಸನಾಗುತ್ತದೆ" ಎಂದು ಹೇಳಿದರು. "ರಾಜ್ಯ ಸರ್ಕಾರ ರೈತರಿಗೆ ನೆರವಾಗುವ ಕೆಲಸ ಮಾಡುತ್ತಿದೆ. ಕೃಷಿ ಮೇಲಿನ ಬಂಡವಾಳವನ್ನು ಹೆಚ್ಚಿಸುವ ಕೆಲಸ ಪ್ರಾರಂಭಿಸಿದೆ. 10 ಲಕ್ಷ ಜನ ರೈತರಿಗೆ ಸಾಲ, ಯಶಸ್ವಿನಿ ಮತ್ತೆ ಜಾರಿ, ಬ್ಯಾಂಕುಗಳ ಕಂಪ್ಯೂಟರೀಕರಣ ಮಾಡಲಾಗುತ್ತಿದೆ. ರೈತರ ಮಕ್ಕಳಿಗೆ ವಿದ್ಯಾನಿಧಿಯನ್ನು ನೀಡಿರುವ ಸರ್ಕಾರ ನಮ್ಮದು" ಎಂದು ಅವರು ವಿವರಿಸಿದರು.

ರೈತರ ಆರೋಗ್ಯ ಹಿತರಕ್ಷಣೆಗೆ ನಿಟ್ಟಿನಲ್ಲಿ ಸರ್ಕಾರ ಈಗಾಗಲೇ 'ಯಶಸ್ವಿನಿ ಯೋಜನೆ' ಮರು ಆರಂಭಿಸಲಾಗಿದೆ. ಇದರಿಂದ ಆಸ್ಪತ್ರೆಯಲ್ಲಿ ತ್ವರಿತ ಚಿಕಿತ್ಸೆ ದೊರೆಯುತ್ತದೆ. ಈ ವರ್ಷ ಆಯವ್ಯಯದಲ್ಲಿ ಯಶಸ್ವಿನಿ ಯೋಜನೆಗೆ 300 ಕೋಟಿ ಇಡಲಾಗಿದೆ. ಯಶಸ್ವಿನಿ ಯೋಜನೆಯಿಂದ ಚಿಕಿತ್ಸೆಗೆ ಅಲೆದಾಟ ತಪ್ಪಿಸಲಿದೆ. ಕುಟುಂಬದ ಎಲ್ಲ ಸದಸ್ಯರು ಯೋಜನೆಯ ಲಾಭ ಪಡೆಯಬಹುದಾಗಿದೆ. ಹೃದಯ, ಕಿಡ್ನಿ, ಕ್ಯಾನ್ಸರ್ ಕಾಯಿಲೆಗಳ ಚಿಕಿತ್ಸೆಯೂ ಈ ಯೋಜನೆಯ ವ್ಯಾಪ್ತಿಗೆ ಬರುತ್ತದೆ.






 
 

Powered by Blogger.