".

Header Ads

ಕನ್ನಡಿಗರಿಗೆ ಶೇ. 70 ಉದ್ಯೋಗ ನೀಡುವುದು ಕಡ್ಡಾಯ : ಸುನಿಲ್‌ ಕುಮಾರ್‌

ಶಿಕ್ಷಣ ಮತ್ತು ಉದ್ಯೋಗದಲ್ಲಿ ಕನ್ನಡಿಗರಿಗೆ ಉತ್ತಮ ಅವಕಾಶ ಒದಗಿಸುವ ಉದ್ದೇಶದ 'ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕ -2022'ಕ್ಕೆ ವಿಧಾನಮಂಡಲ ಅಧಿವೇಶನದಲ್ಲಿ ಅನುಮೋದನೆ ಪಡೆಯಲು ಸರಕಾರ ಎಲ್ಲ ಸಿದ್ಧತೆ ಮಾಡಿಕೊಂಡಿದೆ. 

ವಿಧಾನಸಭೆಯಲ್ಲಿ ಈಗಾಗಲೇ ಮಂಡನೆಯಾಗಿರುವ ವಿಧೇಯಕದ ಬಗ್ಗೆ ಸಾರ್ವಜನಿಕ ಚರ್ಚೆಗಳು ನಡೆಯುತ್ತಿದ್ದು, ವಿಚಾರ ಸಂಕಿರಣಗಳನ್ನು ನಡೆಸಲಾಗುತ್ತಿದೆ. ಗಣ್ಯರು ಪತ್ರ ವ್ಯವಹಾರ ನಡೆಸಿದ್ದು, ಕನ್ನಡ ಸಾಹಿತ್ಯ ಪರಿಷತ್‌ ಕೆಲವು ಸಲಹೆಗಳನ್ನು ನೀಡಿದೆ. ಈ ಎಲ್ಲ ಅಭಿಪ್ರಾಯಗಳನ್ನು ಕ್ರೂಢೀಕರಿಸಿ, ವಿಧಾನಮಂಡಲ ಉಭಯ ಸದನಗಳಲ್ಲಿ ಸಮಗ್ರ ಚರ್ಚೆ ಬಳಿಕ ಶಾಸನ ರೂಪಿಸಲಾಗುತ್ತಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನಿಲ್‌ ಕುಮಾರ್‌ ಸೋಮವಾರ ಸುದ್ದಿಗಾರರಿಗೆ ತಿಳಿಸಿದರು.

ಕನ್ನಡದ ವಿಚಾರದಲ್ಲಿ ಹೊಸ ವರ್ಷದಲ್ಲಿ ಹೊಸ ವ್ಯವಸ್ಥೆ ಜಾರಿಗೆ ಬರುವುದು ನಿಶ್ಚಿತ. ರಾಜ್ಯದಲ್ಲಿ ಉದ್ಯಮ ಚಟುವಟಿಕೆ ಆರಂಭಿಸುವ ಪ್ರತಿ ಸಂಸ್ಥೆಯೂ ಸ್ಥಳೀಯ ಕನ್ನಡಿಗರಿಗೆ ಶೇ. 70 ಉದ್ಯೋಗ ನೀಡುವುದು ಕಡ್ಡಾಯ. ಈ ಕಾನೂನು ಉಲ್ಲಂಘಿಸಿದ ಉದ್ದಿಮೆಗೆ ರಾಜ್ಯ ಸರಕಾರದ ಸೌಲಭ್ಯ, ರಿಯಾಯಿತಿಗಳನ್ನು ಕಡಿತ ಮಾಡಲಾಗುವುದು. ಹೂಡಿಕೆ ಸಂಬಂಧ ಒಪ್ಪಂದಗಳಲ್ಲೇ ಈ ಷರತ್ತುಗಳನ್ನು ಕಾನೂನಿನಲ್ಲಿ ಸೇರ್ಪಡೆ ಮಾಡಲಾಗುತ್ತಿದೆ ಎಂದು ಸಚಿವರು ತಿಳಿಸಿದರು.

Powered by Blogger.