".

Header Ads

ದಾಖಲೆ ಬಹುಮತದೊಂದಿಗೆ ಬಿಜೆಪಿ ಅಧಿಕಾರಕ್ಕೆ'-ಅಮಿತ್ ಶಾ

 


·         ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ದಾಖಲೆ ಬಹುಮತದೊಂದಿಗೆ ಬಿಜೆಪಿ ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ನವದೆಹಲಿಯಲ್ಲಿ ಮಾತನಾಡಿದ ಅವರು, ಗುಜರಾತ್ ವಿಧಾನಸಭೆಗೆ ಮುಂದಿನ ತಿಂಗಳು ಚುನಾವಣೆ ನಡೆಯಲಿದೆ. ಬಿಜೆಪಿಗೆ ಬಹುಮತ ನಿಶ್ಚಿತ. ಅಲ್ಲದೆ ಗುಜರಾತ್‌ನ ನಕ್ಷೆಯಲ್ಲೇ ಆಮ್ ಆದ್ಮಿ ಪಕ್ಷ ಇಲ್ಲ. ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಮಾತ್ರ ಪೈಪೋಟಿ ಇರುವುದು ಎಂದರು.

ಹಿಂದಿನ ಎಲ್ಲಾ ದಾಖಲೆಗಳನ್ನು ಮುರಿದು ಗುಜರಾತ್‌ನಲ್ಲಿ ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸಲಿದೆ ಎಂದವರು ಪ್ರತಿಪಾದಿಸಿದರು.

ಡಿಸೆಂಬರ್ 1 ಮತ್ತು 5ರಂದು ಎರಡು ಹಂತಗಳಲ್ಲಿ ಗುಜರಾತ್ ವಿಧಾನಸಭೆಗೆ ಚುನಾವಣೆ ನಡೆಯಲಿದೆ. ಡಿ.8ಕ್ಕೆ ಮತ ಎಣಿಕೆ ಬಳಿಕ ಫಲಿತಾಂಶ ಪ್ರಕಟಗೊಳ್ಳಲಿದೆ.

 

Powered by Blogger.