".

Header Ads

ಜಾತ್ರೆಗಳಲ್ಲಿ ವ್ಯಾಪಾರಕ್ಕೆ ಹಿಂದೂಗಳಿಗೆ ಮಾತ್ರ ಅವಕಾಶ ನೀಡಿ: ಸರ್ಕಾರಕ್ಕೆ ಮನವಿ ಸಲ್ಲಿಕೆ


 ರಾಜ್ಯದಲ್ಲಿ ಜಾತ್ರಾ ಮಹೋತ್ಸವ ನಡೆಯುವ ವೇಳೆ ವ್ಯಾಪಾರಕ್ಕೆ ಹಿಂದೂಗಳಿಗೆ ಮಾತ್ರ ಅವಕಾಶ ನೀಡಬೇಕು ಎಂದು ಧಾರ್ಮಿಕ ದತ್ತಿ ಇಲಾಖೆಗೆ ಹಾಗೂ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ ,
ಜಾತ್ರೆ ಸಂದರ್ಭದಲ್ಲಿ  ದೇವಸ್ಥಾನದ ಆವರಣದಲ್ಲಿ ಹಿಂದೂಗಳಿಗೆ ಮಾತ್ರ ವ್ಯಾಪಾರಕ್ಕೆ ಅವಕಾಶ ನೀಡಬೇಕು. 2002ರ ಧಾರ್ಮಿಕ ದತ್ತಿ ಇಲಾಖೆ ಕಾಯ್ದೆಯಲ್ಲಿಯೂ ಈ ಬಗ್ಗೆ ಉಲ್ಲೇಖವಿದೆ ಎಂದು ಹಿಂದೂ ಸಂಘಟನೆಗಳು ಹೇಳಿವೆ ಇದೇ ತಿಂಗಳು ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಡೆಯುವ ಚಂಪಾಕ ಷಷ್ಠಿ ಆಚರಣೆಯಲ್ಕಿಯೂ ಅನ್ಯಮತಿಯರಿಗೆ ವ್ಯಾಪಾರಕ್ಕೆ ಅವಕಾಶ ನೀಡಬಾರದು ಎಂದು ಮನವಿಯಲ್ಲಿ ಉಲ್ಲೇಖಿಸಿವೆ.
  ಹಿಂದೂ ಧರ್ಮದವರನ್ನು ಹೊರತು ಪಡಿಸಿ ಬೇರೆ ಧರ್ಮದವರಿಗೆ ವ್ಯಾಪಾರ ಮಾಡಲು ಅವಕಾಶ ನೀಡದಂತೆ ಮನವಿ ಮಾಡಿಕೊಳ್ಳಲಾಗಿದೆ. ಮುಂದಿನ ದಿನಗಳಲ್ಲಿ ರಾಜ್ಯದ ಎಲ್ಲ ಭಾಗದಲ್ಲಿ ಜಾತ್ರಾ ಮಹೋತ್ಸವಗಳು ಶುರುವಾಗಲಿರುವ ಹಿನ್ನೆಲೆ ಹಿಂದೂ ಸಂಘಟನೆಗಳು ಮನವಿಯನ್ನು ಸಲ್ಲಿಸಿವೆ.

Powered by Blogger.