".

Header Ads

ಉಡುಪಿ – ಮತ್ಯಗಂಧ ಎಕ್ಸಪ್ರೆಸ್ ರೈಲಿನಲ್ಲಿ ಕಳ್ಳತನ – 40 ಲಕ್ಷ ಮೌಲ್ಯದ ಚಿನ್ನ ಕಳವು

 


ಮತ್ಯಗಂಧ ಎಕ್ಸಪ್ರೇಸ್ ರೈಲಿನಲ್ಲಿ ಮುಂಬೈನಿಂದ ಉಡುಪಿಗೆ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರ ಬ್ಯಾಗ್ ನಲ್ಲಿ ಚಿನ್ನಾಭರಣವನ್ನು ಕಳ್ಳರು ಕದ್ದೊಯ್ದಿದ್ದಾರೆ. ಸುಮಾರು 40 ಲಕ್ಷ ಮೌಲ್ಯದ ಚಿನ್ನಾಭರಣಗಳು ಮತ್ತು ಡೈಮಂಡ್ ಆಭರಣಗಳನ್ನು ಕಳ್ಳರು ದೋಚಿರುವ ಘಟನೆ ನಡೆದಿದೆ.

·         ಮಹಾರಾಷ್ಟ್ರ ಮುಲುಂದು ವೈಶಾಲಿ ನಗರದ ದೀಪಾ ರೈ (44) ಎಂಬವರು ಮದುವೆ ಕಾರ್ಯಕ್ರಮಕ್ಕೆ ಉಡುಪಿಗೆ ಮತ್ಯಗಂಧ ರೈಲಿನಲ್ಲಿ ಆಗಮಿಸಿದ್ದಾರೆ. ಮದುವೆ ಕಾರ್ಯಕ್ರಮದಲ್ಲಿ ಧರಿಸುವುದಕ್ಕಾಗಿ ಚಿನ್ನಾಭರಣಗಳನ್ನು 3 ಬ್ಯಾಗ್ ಗಳಲ್ಲಿ ಸೀರೆಯ ಮಧ್ಯ ಭಾಗದಲ್ಲಿ ಇಟ್ಟುಕೊಂಡಿದ್ದರು. ಡಿ.6ರಂದು ಬೆಳಗ್ಗೆ ಸುಮಾರು 5 ಗಂಟೆಗೆ ರೈಲು ಕುಂದಾಪುರ ಸ್ಟೇಷನ್ ತಲುಪಿದ್ದು, ಉಡುಪಿಯಲ್ಲಿ ಇಳಿಯುವುದಕ್ಕೆ ಇವರು ಬ್ಯಾಗ್ ಗಳನ್ನು ರೈಲಿನ ಬಾಗಿಲಿನ ಬಳಿ ತಂದು ಇರಿಸಿದ್ದರು.

·          

ರೈಲು ಮುಂಜಾನೆ 5.40 ಗಂಟೆಗೆ ಉಡುಪಿಯ ರೈಲು ಸ್ಟೇಷನ್ ಗೆ ಬಂದಿದ್ದು, ಬಳಿಕ ರೈಲಿನಿಂದ ಇಳಿದು ಕಟಪಾಡಿಯ ಮನೆಗೆ ಹೋಗಿ ಬ್ಯಾಗ್ ಪರಿಶೀಲಿಸಿದಾಗ 3 ಬ್ಯಾಗ್ ನಲ್ಲಿಟ್ಟಿರುವ ಚಿನ್ನಾಭರಣಗಳು ಮತ್ತು ಡೈಮಂಡ್ ಆಭರಣಗಳು ಕಳವಾಗಿರುವುದು ಕಂಡು ಬಂದಿದೆ. ಕಳವಾಗಿರುವ ಚಿನ್ನಾಭರಣಗಳ ಅಂದಾಜು ತೂಕ 850 ಗ್ರಾಂ ಆಗಿದ್ದು, ಒಟ್ಟು ಮೌಲ್ಯ 34 ಲಕ್ಷ ರೂ. ಆಗಬಹುದು ಹಾಗೂ ಕಳವಾದ ಡೈಮಂಡ್ ಮೌಲ್ಯ 6 ಲಕ್ಷ ರೂ. ಎಂದು ಅಂದಾಜಿಸಲಾಗಿದೆ. ಇವುಗಳ ಒಟ್ಟು ಮೌಲ್ಯ ಸುಮಾರು 40 ಲಕ್ಷ ರೂ. ಆಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ರೈಲಿನಲ್ಲಿದ್ದ 4 ಜನ 40 ರಿಂದ 50 ವರ್ಷ ವಯಸ್ಸಿನ ಕಳ್ಳರು ಚಿನ್ನಾಭರಣ ಗಳನ್ನು ಕಳವು ಮಾಡಿರಬಹುದು ಎಂದು ಶಂಕಿಸಲಾಗಿದೆ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

 

Powered by Blogger.