".

Header Ads

ಮಹಾರಾಷ್ಟ್ರದ ಜನರ ತಾಳ್ಮೆಯನ್ನು ಪರೀಕ್ಷಿಸಬೇಡಿ: ಕರ್ನಾಟಕಕ್ಕೆ ಶರದ್ ಪವಾರ್ ಎಚ್ಚರಿಕೆ

 


ಕರ್ನಾಟಕ-ಮಹಾರಾಷ್ಟ್ರ ನಡುವಿನ ಗಡಿ ವಿವಾದ ಉಲ್ಬಣಗೊಂಡಿರುವ ನಡುವೆಯೇ ಮುಂದಿನ 24 ಗಂಟೆಗಳಲ್ಲಿ ಪರಿಸ್ಥಿತಿ ಸುಧಾರಿಸದೇ ಅಹಿತಕರ ಘಟನೆ ನಡೆದರೆ ಅದಕ್ಕೆ ಕೇಂದ್ರ ಮತ್ತು ಕರ್ನಾಟಕದ ಬಿಜೆಪಿ ಸರ್ಕಾರವೇ ನೇರ ಹೊಣೆ ಎಂದು ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಹೇಳಿದ್ದಾರೆ.

ಗಡಿ ವಿವಾದದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಮಹಾರಾಷ್ಟ್ರದ ಜನರ ತಾಳ್ಮೆಯನ್ನು ಪರೀಕ್ಷಿಸಬೇಡಿ ಮತ್ತು ಸೌಹಾರ್ದಯುತವಾಗಿ ಸಮಸ್ಯೆಯನ್ನು ಬಗೆಹರಿಸಿಕೊಳ್ಳಿ ಎಂದು ಪವಾರ್ ಕರ್ನಾಟಕ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಗಡಿ ವಿಚಾರಕ್ಕೆ ಸಂಬಂಧಿಸಿದಂತೆ ಈಗ ದೃಢ ನಿಲುವು ತೆಗೆದುಕೊಳ್ಳುವ ಸಮಯ ಬಂದಿದೆ. ಯಾವುದೇ ನಿರ್ಧಾರವನ್ನು ತೆಗೆದುಕೊಳ್ಳುವ ಮೊದಲು ಮುಖ್ಯಮಂತ್ರಿ ಏಕನಾಥ್ ಶಿಂಧೆ ಎಲ್ಲಾ ಪಕ್ಷಗಳನ್ನು ವಿಶ್ವಾಸದಲ್ಲಿಟ್ಟುಕೊಳ್ಳಬೇಕು. ಸಂಸತ್ತಿನ ಅಧಿವೇಶನ ಪ್ರಾರಂಭವಾಗಲಿದ್ದು ಎಲ್ಲಾ ಸಂಸದರು ಒಗ್ಗೂಡಿ ಮತ್ತು ಅದೇ ನಿಲುವನ್ನು ತೆಗೆದುಕೊಳ್ಳುವಂತೆ ನಾನು ಮನವಿ ಮಾಡುತ್ತೇನೆ ಎಂದು ಹೇಳಿದರು.

Powered by Blogger.