ಚರಂಡಿಯಲ್ಲಿದ್ದ ಸೂಟ್‌ಕೇಸ್‌ನಲ್ಲಿ ಮಹಿಳೆಯ ಶವ
ದೆಹಲಿಯ ಪಂಜಾಬಿ ಭಾಗ್‌ನಲ್ಲಿ ಘಟನೆ ಸೂಟ್‌ಕೇಸ್ ಪತ್ತೆಯಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಸೂಟ್‌ಕೇಸ್‌ನಿಂದ ವಾಸನೆ ಬರುತ್ತಿದೆ ಎಂದು ಕಂಟ್ರೋಲ್ ರೂಮ್‌ಗೆ ಸಾರ್ವಜನಿಕರು ನೀಡಿದ ದೂರನ್ನು ಆಧರಿಸಿ, ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ.
ಸ್ಥಳಕ್ಕೆ ಧಾವಿಸಿದ ಪೊಲೀಸರ ತಂಡ ಸ್ಥಳೀಯ ಡೈವರ್‌ಗಳ ಸಹಾಯದಿಂದ ಚರಂಡಿಯಿಂದ ಸೂಟ್‌ಕೇಸ್ ಅನ್ನು ಹೊರತೆಗೆದು ಪರಿಶೀಲಿಸಿದಾಗ ತೀರಾ ಕೊಳೆತ ಸ್ಥಿತಿಯಲ್ಲಿ ಮಹಿಳೆಯ ಮೃತದೇಹ ಪತ್ತೆಯಾಗಿದೆ. ಆ ಮಹಿಳೆಯ ವಯಸ್ಸು28ರಿಂದ 30 ವರ್ಷ ಎಂದು ಅಂದಾಜಿಸಲಾಗಿದ್ದು, ಗುರುತು ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.


Post a Comment