".

Header Ads

ಮಾಂಡೌಸ್ ಚಂಡಮಾರುತ: ತಮಿಳುನಾಡು, ಪುದುಚೇರಿ, ಆಂಧ್ರ ಪ್ರದೇಶಕ್ಕೆ ಭಾರೀ ಮಳೆ ಎಚ್ಚರಿಕೆ

 


ನೈ
ಋತ್ಯ ಹಾಗೂ ಆಗ್ನೇಯ ಬಂಗಾಳ ಕೊಲ್ಲಿಯಲ್ಲಿ ಮಾಂಡೌಸ್ ಚಂಡಮಾರುತ ತೀವ್ರಗೊಂಡಿದ್ದು, ಭಾರತೀಯ ಹವಾಮಾನ ಇಲಾಖೆ   ಗುರುವಾರ ಉತ್ತರ ತಮಿಳುನಾಡು, ಪುದುಚೇರಿ ಹಾಗೂ ದಕ್ಷಿಣ ಆಂಧ್ರಪ್ರದೇಶದ ಕರಾವಳಿ ಭಾಗದಲ್ಲಿ ಭಾರೀ ಮಳೆಯ ಎಚ್ಚರಿಕೆಯನ್ನು ನೀಡಿದೆ. ನವದೆಹಲಿ: ನೈಋತ್ಯ ಹಾಗೂ ಆಗ್ನೇಯ ಬಂಗಾಳ ಕೊಲ್ಲಿಯಲ್ಲಿ ಮಾಂಡೌಸ್ ಚಂಡಮಾರುತ ತೀವ್ರಗೊಂಡಿದ್ದು, ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಗುರುವಾರ ಉತ್ತರ ತಮಿಳುನಾಡು, ಪುದುಚೇರಿ ಹಾಗೂ ದಕ್ಷಿಣ ಆಂಧ್ರಪ್ರದೇಶದ ಕರಾವಳಿ ಭಾಗದಲ್ಲಿ ಭಾರೀ ಮಳೆಯ ಎಚ್ಚರಿಕೆಯನ್ನು ನೀಡಿದೆ.
ಮಾಂಡೌಸ್' ನೈಋತ್ಯ ಬಂಗಾಳ ಕೊಲ್ಲಿಯ ಮೇಲೆ ಕಾರೈಕಲ್ನಿಂದ ಪೂರ್ವ ಆಗ್ನೇಯಕ್ಕೆ ಸುಮಾರು 500 ಕಿಮೀ ದೂರದಲ್ಲಿದೆ. ಇದು ಪಶ್ಚಿಮ-ವಾಯುವ್ಯಕ್ಕೆ ಚಲಿಸಲಿದ್ದು, ನಂತರ ಉತ್ತರ ತಮಿಳುನಾಡು, ಪುದುಚೇರಿ ಮತ್ತು ದಕ್ಷಿಣ ಆಂಧ್ರಪ್ರದೇಶದ ಕರಾವಳಿಯನ್ನು ಪ್ರವೇಶಿಸಿ, ಪುದುಚೇರಿ ಮತ್ತು ಶ್ರೀಹರಿಕೋಟಾ ನಡುವೆ ಡಿಸೆಂಬರ್ 9 ರ ಮಧ್ಯರಾತ್ರಿ 70 ಕಿಮೀ ವೇಗದಲ್ಲಿ ಗಾಳಿ ಬೀಸುವ ನಿರೀಕ್ಷೆಯಿದೆ ಎಂದು ಎಚ್ಚರಿಕೆ ನೀಡಿದೆ. ಮಾಂಡೌಸ್ ಚಂಡಮಾರುತದ ಪ್ರಭಾವದಿಂದಾಗಿ ಮುಂದಿನ 2 ದಿನಗಳ ಕಾಲ ಹಲವಾರು ರಾಜ್ಯಗಳಲ್ಲಿ ಭಾರೀ ಪ್ರಮಾಣದ ಮಳೆಯಾಗಲಿದೆ. ತಮಿಳುನಾಡಿನ ಕರಾವಳಿ ಭಾಗ, ಪುದುಚೇರಿ ಮತ್ತು ಕಾರೈಕಲ್ನಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗಲಿದೆ.
Powered by Blogger.