".

Header Ads

ತುಳುನಾಡಿನ ದೈವಾರಾಧನೆಗೆ ಸಂಸದ ತೇಜಸ್ವಿ ಸೂರ್ಯ ಚಪ್ಪಲಿ ಧರಿಸಿ ದೈವದ ದೀವಟಿಕೆ ಹಿಡಿದು ಫೋಟೋಗೆ ಪೋಸ್‌ ಕೊಟ್ಟು ಅವಮಾನ!!!

 


ಸಂಸದ ತೇಜಸ್ವಿ ಸೂರ್ಯ ಚಪ್ಪಲಿ ಹಾಕಿಕೊಂಡೇ ದೈವದ ದೀವಟಿಗೆ ಹಿಡಿದು ನಿಂತ ಫೋಟೋವೊಂದು ಸಾಮಾಜಿಕ
ಜಾಲತಾಣಗಳಲ್ಲಿ ವೈರಲ್‌ ಆಗಿದೆ. ಈ ಮೂಲಕ ತೇಜಸ್ವಿ ಸೂರ್ಯ ದೈವರಾಧನೆಗೆ ಅವಮಾನ ಮಾಡಿದ್ದಾರೆ .
 ನಿನ್ನೆ ಬೆಂಗಳೂರಿನ ರಾಷ್ಟ್ರೋತ್ಥಾನದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ದೈವರಾಧನೆಯ ಕಾರ್ಯಕ್ರಮವಿತ್ತು. ಇದರಲ್ಲಿ ತೇಜಸ್ವಿ ಅವರು ಚಪ್ಪಲಿ ಧರಿಸಿ  ದೈವದ ದೀವಟಿಕೆ ಹಿಡಿದು ಫೋಟೋಗೆ ಪೋಸ್‌ ಕೊಟ್ಟಿದ್ದಕ್ಕೆ ಭಾರೀ ಆಕ್ರೋಶ ವ್ಯಕ್ತವಾಗಿದೆ.

 ಬೆಂಗಳೂರಿನಲ್ಲಿ ರಾಷ್ಟ್ರೋತ್ಥಾನದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ದೈವರಾಧನೆಯ ಕಾರ್ಯಕ್ರಮವಿತ್ತು. ಇದರಲ್ಲಿ ತೇಜಸ್ವಿ ಚಪ್ಪಲಿ ಧರಿಸಿ ದೈವದ ದೀವಟಿಕೆ ಹಿಡಿದು ಫೋಟೋಗೆ ಪೋಸ್ ಕೊಟ್ಟಿರುವುದನ್ನು ನಾವು ಕಾಣಬಹುದಾಗಿದೆ. ಫೋಟೋ ವೈರಲ್ ಬೆನ್ನಲ್ಲೇ ದೈವಾರಾಧನೆಗೆ ತೇಜಸ್ವಿ ಅವಮಾನ ಮಾಡಿದ್ದಾರೆ ಅಂತಾ ಆಕ್ರೋಶವ್ಯಕ್ತವಾಗಿದೆ. ಸದ್ಯ ಈ ಫೋಟೊವನ್ನು ಸಾಮಾಜಿಕ ಜಾಲತಾಣದಿಂದ ಸಂಸದರು ಡಿಲೀಟ್ ಮಾಡಿದ್ದಾರೆ. 

ದೈವದ ಪಾತ್ರ ಹಾಕಿರುವವರ ಕೈಯಲ್ಲಿರುವ ಜೀಟಿಗೆಯನ್ನು ಕಾಲಿಗೆ ಶೂ ಹಾಕಿರುವ ಸಂಸದ ತೇಜಸ್ವಿ ಸೂರ್ಯ ಹಿಡಿದುಕೊಂಡಿರುವುದರ ವಿರುದ್ದ ತುಳುನಾಡಿನಲ್ಲಿ ಆಕ್ರೋಶ ವ್ಯಕ್ತವಾಗಿದೆ. 

ದೈವರಾಧನೆಗೆ ಆಗುತ್ತಿರುವ ಅವಮಾನಗಳ ವಿರುದ್ದ ತುಳುನಾಡಿನ ಸಂಸದ ಸಚಿವರು ಶಾಸಕರು ಮೌನವಾಗಿರುವುದರ ವಿರುದ್ದವೂ ಆಕ್ರೋಶ ವ್ಯಕ್ತವಾಗಿದೆ.


Powered by Blogger.