ಲಾರಿಯ ಚಕ್ರ ಮೈಮೇಲೆ ಹರಿದು ಸ್ಕೂಟರ್ ಸವಾರ ಸ್ಥಳದಲ್ಲೇ ಸಾವು
ಹೆಬ್ರಿಯ ಚಾರ ಕ್ರಾಸ್ ಬಳಿ ಗುರುವಾರ ಲಾರಿ ಮತ್ತು ಟಿವಿ ಎಸ್ ಸ್ಕೂಟರ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಸ್ಕೂಟರ್ ಸವಾರ ಹೆರ್ಗಲ್ ಭಾಸ್ಕರ ಶೆಟ್ಟಿ ಸ್ಥಳದಲ್ಲೇ ಮೃತಪಟ್ಟಿದಾರೆ
ಸ್ಕೂಟರ್ ಸವಾರ ಸಂತೆ ಮಾರುಕಟ್ಟೆಗೆ ಹೋಗುತ್ತಿರುವಾಗ ಹೆಬ್ರಿಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಲಾರಿ ಡಿಕ್ಕಿಯಾಗಿದೆ.
ಲಾರಿಯ ಚಕ್ರ ಮೈಮೇಲೆ ಹರಿದು ಸ್ಥಳದಲ್ಲೇ ಸಾವು ಸಂಭವಿಸಿದೆ. ಅಪಘಾತದ ಬಳಿಕ ಲಾರಿ ಚರಂಡಿಗೆ ಡಿಕ್ಕಿಯಾಗಿದ್ದು ಲಾರಿ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಘಟನಾ ಸ್ಥಳಕ್ಕೆ ಹೆಬ್ರಿ ಇನ್ಸ್ಪೆಕ್ಟರ್ ನಾಗರಾಜ್, ಪಿಎಸ್ಐ ಸುದರ್ಶನ್ ದೊ ಡ್ಡಮನಿ ಭೇಟಿ ನೀಡಿ ಪರಿಶೀಲಿಸಿದರು. ಹೆಬ್ರಿ ಠಾಣೆಯಲ್ಲಿಪ್ರಕರಣ ದಾಖಲಾಗಿದೆ.


Post a Comment