ತಮಿಳುನಾಡಿನಲ್ಲಿ ಅಯ್ಯಪ್ಪ ಸ್ವಾಮಿ ಮಾಲಾಧಾರಿ ಭಕ್ತರಿದ್ದ ವಾಹನದ ಮೇಲೆ ಕಲ್ಲು ತೂರಾಟ
ಬೆಳಗಾವಿ ಗಡಿ ವಿಚಾರದಲ್ಲಿ ಮಹಾರಾಷ್ಟ್ರ ಪುಂಡರು ಕಾಲು ಕೆರೆದು ಜಗಳಕ್ಕೆ ಬರ್ತಿದ್ದಾರೆ. ನಿನ್ನೆ ಶಿವಸೇನೆ ಬಣ, ಮಹಾರಾಷ್ಟ್ರ ನವ ನಿರ್ಮಾಣ ಸೇನೆ ಸೇರಿದಂತೆ ,ಪುಣೆಯ ಹೊರವಲಯ ಬೆಂಗಳೂರು ಪುಣೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಬರ್ತಿದ್ದ ಕೆಎಸ್ಆರ್ಟಿಸಿ ಬಸ್ ತಡೆದು ಜೈ ಮಹಾರಾಷ್ಟ್ರ ಅಂತಾ ಗೀಚಿದ್ದರು. ಆದ್ರೆ ಈಗ ಮಹಾರಾಷ್ಟ್ರ ಪುಂಡರ ಅಟ್ಟಹಾಸ ಮುಂದುವರೆದಿದೆ. ಮಹಾರಾಷ್ಟ್ರ ಆಯ್ತು ಈಗ ತಮಿಳುನಾಡಿನಲ್ಲೂ ಕನ್ನಡಿಗರ ವಾಹನದ ಮೇಲೆ ಕಿರಿಕ್ ಮಾಡುತ್ತಿದ್ದಾರೆ.
ಕಿಡಿಗೇಡಿಗಳು ಕರ್ನಾಟಕದ ಟಿಟಿ ವಾಹನದ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯಿಂದ ಶಬರಿಮಲೆ ಪ್ರವಾಸಕ್ಕೆ ತೆರಳಿ ವಾಪಾಸ್ಸಾಗುತ್ತಿದ್ದ ಅಯ್ಯಪ್ಪ ಸ್ವಾಮಿ ಮಾಲಾಧಾರಿ ಭಕ್ತರಿದ್ದ ವಾಹನದ ಮೇಲೆ ತಮಿಳುನಾಡಿನ ಮಧುರೈನಲ್ಲಿ ಕಲ್ಲು ತೂರಾಟ ನಡೆದಿದೆ. ಅಯ್ಯಪ್ಪಸ್ಚಾಮಿ ದರ್ಶನ ಮುಗಿಸಿ ಮಧುರೆ ದೇವಾಲಯಕ್ಕೆ ಆಗಮಿಸಿದ್ದ ಕನ್ನಡಿಗರು ಟಿಟಿ ವಾಹನದ ಮೇಲೆ ಕನ್ನಡ ಧ್ವಜ ಕಟ್ಟಿದ್ದಕ್ಕೆ ಕಿಡಿಗೇಡಿಗಳು ಕಿರಿಕ್ ಮಾಡಿದ್ದಾರೆ. ಕನ್ನಡ ಧ್ವಜ ಕಟ್ಟಿರೋದಕ್ಕೆ ಉದ್ದೇಶಪೂರ್ವಕವಾಗಿ ಕಲ್ಲು ತೂರಾಟ ನಡೆಸಿದ್ದಾರೆ. ನಮಗೆ ರಕ್ಷಣೆ ಕೊಡಿ ಎಂದು ಕನ್ನಡಿಗರು ಮನವಿ ಮಾಡಿಕೊಂಡಿದ್ದಾರೆ.

Post a Comment