".

Header Ads

ಶಾಲೆಗಳಿಗೆ ಸರಕಾರದಿಂದಲೇ ಬಸ್‌ ಸೌಲಭ್ಯ (Bus facility for government school): ಸಿಎಂ ಬಸವರಾಜ್‌ ಬೊಮ್ಮಾಯಿ


 ರಾಜ್ಯದಾದ್ಯಂತ ಶಾಲಾ ಮಕ್ಕಳಿಗೆ ಸಹಾಯವಾಗಲೆಂದು ಶಾಲೆಗಳಿಗೆ ಬಸ್‌ ಸೌಲಭ್ಯವನ್ನು ಕಲ್ಪಿಸಲಾಗುತ್ತಿದೆ. ಮಾನ್ಯ ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಶಾಲಾ ಮಕ್ಕಳಿಗೆ ಸಹಾಯವಾಗಲೆಂದು ಈ ಯೋಜನೆ ತರಲಾಗುತ್ತಿದೆ ಎಂದು ತಿಳಿಸಿದ್ದಾರೆ.

 ರಾಜ್ಯದಾದ್ಯಂತ ಶಾಲಾ ಮಕ್ಕಳಿಗೆ ವಿಶೇಷ ಸಾರಿಗೆ ಸೌಲಭ್ಯ ಕಲ್ಲಿಸುವ ಯೋಜನೆ ಜಾರಿಗೊಳಿಸಲಾಗುವುದು. ಖಾಸಗಿಯವರ ಸಹಭಾಗಿತ್ವದಲ್ಲಿ ಈ ಯೋಜನೆ ಜಾರಿ ಬಗ್ಗೆ ಚರ್ಚೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ. ಈ ಯೋಜನೆಯಿಂದಾಗಿ ದೂರದಿಂದ ನಡೆದು ಹೋಗುವ ಶಾಲಾ ಮಕ್ಕಳಿಗೆ ಸಹಾಯವಾಗುತ್ತದೆ ಎಂದು ತಿಳಿಸಿದ್ದಾರೆ. ಈ ಯೋಜನೆ ಕೇವಲ ಶಾಲಾ ಮಕ್ಕಳಿಗೆ ಮಾತ್ರವಲ್ಲದೇ ಶಿಕ್ಷಕರಿಗೂ ಸಹ ಸಹಾಯವಾಗುತ್ತದೆ ಎಂದು ತಿಳಿಸಿದ್ದಾರೆ.

ಈ ಯೋಜನೆಯನ್ನು ತಮ್ಮ ಕ್ಷೇತ್ರದಿಂದಲೇ ಆರಂಭಿಸುವಂತೆ ವಾಯವ್ಯ ಸಾರಿಗೆ ಸಂಸ್ಥೆಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಖಾಸಗಿ ಶಾಲೆಗಳಲ್ಲಿ ಮಾತ್ರ ವಿಶೇಷವಾಗಿ ಶಾಲಾ ವಾಹನವನ್ನು ಬಿಡಲಾಗುತ್ತಿದ್ದು, ಹಲವಾರು ಮಕ್ಕಳು ಇದರಿಂದ ಪ್ರಯೋಜನ ಪಡೆದುಕೊಳ್ಳುತ್ತಿದ್ದಾರೆ. ಆದರೆ ಗ್ರಾಮೀಣ ಪ್ರದೇಶಗಳಲ್ಲಿ ಎಷ್ಟೋ ಕಡೆ ಶಾಲಾ ಮಕ್ಕಳಿಗೆ ಬಸ್‌ನ ಸೌಕರ್ಯ ಇರುವುದಿಲ್ಲ. ಶಾಲೆಗೆ ಮಕ್ಕಳು ದೂರದಿಂದ ನಡೆದುಕೊಂಡು ಹೋಗುತ್ತಾರೆ ಎಂದು ತಿಳಿಸಿದ್ದಾರೆ.

 

Powered by Blogger.