".

Header Ads

ಪಾಕ್ 'ಪೇಶಾವರ ಮಸೀದಿ' ಮೇಲೆ ಬಾಂಬ್ ದಾಳಿ ; 17 ಜನ ಸಾವು, 90ಕ್ಕೂ ಹೆಚ್ಚು ಮಂದಿಗೆ ಗಾಯ


ಪಾಕಿಸ್ತಾನದ ಪೇಶಾವರದಲ್ಲಿ ಮಸೀದಿಯೊಂದರ ಬಳಿ ಭೀಕರ ಬಾಂಬ್ ಸ್ಫೋಟ ಸಂಭವಿಸಿದ್ದು, ಇದ್ರಲ್ಲಿ 17 ಮಂದಿ ಸಾವನ್ನಪ್ಪಿದ್ದು, 90ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಪಾಕಿಸ್ತಾನದ ಮಾಧ್ಯಮ ಸಂಸ್ಥೆ ಡಾನ್ ಪ್ರಕಾರ, ಮಧ್ಯಾಹ್ನ 1: 40 ರ ಸುಮಾರಿಗೆ ಮಸೀದಿಯಲ್ಲಿ ಪ್ರಾರ್ಥನೆ ನಡೆಯುತ್ತಿದ್ದಾಗ ಸ್ಫೋಟ ಸಂಭವಿಸಿದ್ದು, ಸ್ಫೋಟದ ಕಾರಣವನ್ನು ಇನ್ನೂ ಬಹಿರಂಗಪಡಿಸಲಾಗಿಲ್ಲ.

ವಿನಾಶಕಾರಿ ಸ್ಫೋಟದಲ್ಲಿ 90ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ವರದಿಗಳ ಪ್ರಕಾರ, 17 ಮಂದಿ ಸಾವನ್ನಪ್ಪಿದ್ದಾರೆ ಎಂದು ಶಂಕಿಸಲಾಗಿದೆ.

ಲೇಡಿ ರೀಡಿಂಗ್ ಹಾಸ್ಪಿಟಲ್ (LRC) ವಕ್ತಾರ ಮೊಹಮ್ಮದ್ ಅಸಿಮ್ ಅವರ ಪ್ರಕಾರ, ಗಾಯಗೊಂಡವರನ್ನ ಹತ್ತಿರದ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಪಾಕಿಸ್ತಾನದ ಪತ್ರಿಕೆ ವರದಿ ಮಾಡಿದೆ.


Powered by Blogger.