".

Header Ads

ಜ. 29 ರಂದು ಭ್ರಾಮರಿ ಯಕ್ಷನೃತ್ಯ ಕಲಾನಿಲಯ ಚಾರಿಟೇಬಲ್ ಟ್ರಸ್ಟ್ (ರಿ) ಮುಂಬಯಿ ಇದರ ಡೊಂಬಿವಲಿ ವಿಭಾಗದ ನಾಲ್ಕನೇ ವಾರ್ಷಿಕೋತ್ಸವ ಮತ್ತು ಪ್ರಶಸ್ತಿ ಪ್ರದಾನ ಕಾರ್ಯಕ್ರಮ


ಭ್ರಾಮರಿ ಯಕ್ಷನೃತ್ಯ ಕಲಾನಿಲಯ ಚಾರಿಟೇಬಲ್ ಟ್ರಸ್ಟ್ (ರಿ) ಮುಂಬಯಿ ಇದರ ಡೊಂಬಿವಲಿ ವಿಭಾಗದ ನಾಲ್ಕನೇ ವಾರ್ಷಿಕೋತ್ಸವ ಮತ್ತು ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಜನವರಿ 29 ರ ರವಿವಾರ ಅಪರಾಹ್ನ 3 ಗಂಟೆಗೆ ಸರಿಯಾಗಿ ಡೊಂಬಿವಲಿ ಪೂರ್ವದ  ಶ್ರೀ ವರದ ಸಿದ್ಧಿವಿನಾಯಕ ಸೇವಾ ಭವನದಲ್ಲಿ ಜರುಗಲಿದೆ. 

ಮನೋರಂಜನ ಕಾರ್ಯಕ್ರಮದ ಅಂಗವಾಗಿ ಶಿಬಿರದ ಕಲಾವಿದರಿಂದ 'ಕಟೀಲು ಕ್ಷೇತ್ರ ಮಹಾತ್ಮೆ' ಎಂಬ ತುಳು ಯಕ್ಷಗಾನ ಬಯಲಾಟ ನಡೆಯಲಿದೆ. 

 ಕಲಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದು ಕಾರ್ಯಕ್ರಮವನ್ನು ಚಂದಗಾಣಿಸಬೇಕಾಗಿ ಭ್ರಾಮರಿ ಯಕ್ಷನೃತ್ಯ ಕಲಾನಿಲಯ ಚಾರಿಟೇಬಲ್ ಟ್ರಸ್ಟ್ (ರಿ) ಮುಂಬಯಿ ಇದರ ಪರವಾಗಿ ಗೌರವಾಧ್ಯಕ್ಷರು, ಅಧ್ಯಕ್ಷರು, ಟ್ರಸ್ಟಿಗಳು, ಪದಾಧಿಕಾರಿಗಳು ಮತ್ತು ಶಿಭಿರ ಪ್ರಮುಖೆ ಪತ್ರಿಕಾ ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.

Powered by Blogger.