ಯಡಿಯೂರಪ್ಪ ಬೆಂಬಲಿಗ 30 ಶಾಸಕರು ಸಹಿ ಮಾಡಿ ಬೊಮ್ಮಾಯಿ ನಾಯಕತ್ವ ಬದಲಾಗಬೇಕು ಎಂದು ದಿಲ್ಲಿಗೆ ಪತ್ರ !
'ಬಿಜೆಪಿಯಲ್ಲಿ ಗುಂಪುಗಾರಿಕೆ ಹೆಚ್ಚಾಗಿದ್ದು, ಬಿ.ಎಸ್. ಯಡಿಯೂರಪ್ಪ, ಬೊಮ್ಮಾಯಿ ನಾನೊಂದು ತೀರಾ ನೀನೊಂದು.
'ತೀರದಂತಾಗಿದ್ದಾರೆ. ದಿಲ್ಲಿಯ ಕಾರ್ಯಕಾರಣಿ ಸಭೆಯಲ್ಲಿ ಯಡಿಯೂರಪ್ಪ ಬೆಂಬಲಿಗ 30 ಶಾಸಕರು ಸಹಿ ಮಾಡಿ ಬೊಮ್ಮಾಯಿ ನಾಯಕತ್ವ ಬದಲಾಗಬೇಕು ಎಂದು ಪತ್ರ ಬರೆದಿದ್ದಾರೆ" ಎಂದು ಕೆಪಿಸಿಸಿ ಸಂವಹನ ವಿಭಾಗದ ಉಪಾಧ್ಯಕ್ಷ ರಮೇಶ್ ಬಾಬು ಹೇಳಿದ್ದಾರೆ.
ಮಂಗಳವಾರ ನಗರದ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಬಿಜೆಪಿಯಲ್ಲಿ ಆಂತರಿಕ ಭಿನ್ನಾಭಿಪ್ರಾಯ ಮುಗಿಲು ಮುಟ್ಟಿದೆ. ಇದೇ ಕಾರಣಕ್ಕೆ ಅಮಿತ್ ಶಾ ಮಂಡ್ಯಕ್ಕೆ ಬಂದಾಗ ಯಡಿಯೂರಪ್ಪ ತಪ್ಪಿಸಿಕೊಂಡರು.
ನಳೀನ್ ಕುಮಾರ್, ಸಿ.ಟಿ.ರವಿ ಅವರದ್ದು ಒಂದು ತಂಡ, ಯತ್ನಾಳ್ ಅವರದ್ದು ಮತ್ತೊಂದು ತಂಡ, ಬೊಮ್ಮಾಯಿ,
ಯಡಿಯೂರಪ್ಪನವರದ್ದು ಮತ್ತೊಂದು ತಂಡವಾಗಿದೆ. ರಾಜ್ಯ ಬಿಜೆಪಿ ಉಸ್ತುವಾರಿ ಅರುಪ್ ಸಿಂಗ್‌ಗೆ ನಾಯಕರ ಜತೆ ವ್ಯವಹಾರ ಮಾಡಲು ಸಮಯ ಸಾಲುತ್ತಿಲ್ಲ' ಎಂದು ಟೀಕಿಸಿದರು.

Post a Comment