ಅರೇಬಿಯಾ ದೇಶದ ಕರೆನ್ಸಿ ಮತ್ತು ಚಿನ್ನ ಇದೆ ಎಂದು ಬಣ್ಣದ ಮಾತಗಳನ್ನಾಡಿ 4 ಲ.ರೂ. ಹಣ ಪಡೆದು ಕಾಗದದ ಕಟ್ಟನ್ನು ನೀಡಿ ವಂಚನೆ
ಜ.29ರಂದು ಅಪರಿಚಿತ ವ್ಯಕ್ತಿ ಅಂಗಡಿಯಾತನಿಗೆ ಕರೆ ಮಾಡಿ 4 ಲ.ರೂ.ಗಳೊಂದಿಗೆ ಮಂಗಳೂರಿಗೆ ಬಂದು ಕರೆ ಮಾಡುವಂತೆ ತಿಳಿಸಿದ್ದು ಅದರಂತೆ ಅಂಗಡಿಯಾತ ಜ.30ರಂದು ಅಪರಿಚಿತ ವ್ಯಕ್ತಿಗೆ ಕರೆ ಮಾಡಿದಾಗ ನಗರದ ಸ್ಟೇಟ್‌ಬ್ಯಾಂಕ್ ಸರ್ವಿಸ್ ಬಸ್ ನಿಲ್ದಾಣಕ್ಕೆ ಹೋಗುವ ಮೈದಾನದ ಬಳಿ ಇರುವ ಮೆಸ್ಕಾಂ ಕಚೇರಿ ಮುಂಭಾಗದಲ್ಲಿ ಕಾಯುವಂತೆ ತಿಳಿಸಿದ , ಅಲ್ಲಿಗೆ ಬಂದ ಅಪರಿಚಿತ ವ್ಯಕ್ತಿ ಅಂಗಡಿಯಾತನಿಂದ 4 ಲ.ರೂ. ಪಡೆದು ಆತನ ಕೈಯಲ್ಲಿದ್ದ ಪ್ಲಾಸ್ಟಿಕ್ ಕಟ್ಟನ್ನು ನೀಡಿ ತೆರಳಿದ.ಅಪರಿಚಿತ ವ್ಯಕ್ತಿಯು ಆತನ ಬಳಿ ಸೌದಿ ಅರೇಬಿಯಾ ದೇಶದ ಕರೆನ್ಸಿ ಮತ್ತು ಚಿನ್ನ ಇದ್ದು ಅದನ್ನು ಕಡಿಮೆ ಬೆಲೆಗೆ ಕೊಡುವುದಾಗಿ ನಂಬಿಸಿ, ಬಣ್ಣ ಬಣ್ಣದ ಮಾತಗಳನ್ನಾಡಿ ಹಣ ಪಡೆದು ಕಾಗದದ ಕಟ್ಟನ್ನು ನೀಡಿ ತೆರಳಿದ, ಅಂಗಡಿಯಾತ ಕಟ್ಟನ್ನು ತೆರೆದು ಪರಿಶೀಲಿಸಿದಾಗ ಅದರಲ್ಲಿ ಕಾಗದ ತುಂಡುಗಳನ್ನು ಮಡಚಿ ಒಂದರ ಮೇಲೆ ಒಂದರಂತೆ ನೋಟಿನಂತೆ ಇಟ್ಟು ವಂಚನೆ ಎಸಗಿರುವುದು ತಿಳಿದುಬಂದಿದೆ, ಇದರ ಬಗ್ಗೆ ಮಂಗಳೂರು ದಕ್ಷಿಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Post a Comment