ವಿಮಾನ ಪ್ರಯಾಣಿಕರಿಗೆ ಸಿಹಿಸುದ್ದಿ! ಟಿಕೆಟ್ ಡೌನ್‌ಗ್ರೇಡ್ ಮಾಡಿದ್ರೆ ಶೇ 75 ರಷ್ಟು ಹಣ ವಾಪಸ್
ವಿಮಾನ ಪ್ರಯಾಣಕ್ಕಾಗಿ ಕಾಯ್ದಿರಿಸಿದ ಟಿಕೆಟ್‌ಗಳನ್ನು ಡೌನ್‌ಗ್ರೇಡ್ ಮಾಡಿದರೆ ದೇಶೀಯ ಪ್ರಯಾಣಿಕರಿಗೆ ಶೇ. 75ರಷ್ಟು ಹಣವನ್ನು ವಿಮಾನಯಾನ ಸಂಸ್ಥೆಗಳು ಮರುಪಾವತಿ ಮಾಡಬೇಕು ಎಂದು ನಾಗರಿಕ ವಿಮಾನಯಾನ ನಿರ್ದೇಶನಾಲಯ ತಿಳಿಸಿದೆ.
ಕಳೆ ದ ಕೆಲವು ದಿನಗಳಿಂದ ವಿಮಾನಯಾನ ಸಂಸ್ಥೆಗಳ ಲೋಪದೋಷಗಳು ಒಂದೊಂದಾಗಿ ಬೆಳಕಿಗೆ ಬರುತ್ತಿವೆ. ಇದರಿಂದ ಪ್ರಯಾಣಿಕರು ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ. ಇದೀಗ ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ವಿಮಾನಯಾನ ಸಂಸ್ಥೆಗಳ ಮೇಲೆ ಕ್ರಮಕೈಗೊಂಡಿದೆ. ಹೊಸ ಬೆಳವಣಿಗೆಯಲ್ಲಿ ಡಿಜಿಸಿಎ ನಾಗರಿಕ ವಿಮಾನಯಾನ ಅಗತ್ಯ ಗೆ ತಿದ್ದುಪಡಿ ಮಾಡಿದೆ. ಪ್ರಯಾಣಿಕರು ಇದರ ಪ್ರಯೋಜನವನ್ನು ನೇರವಾಗಿ ಪಡೆಯಲಿದ್ದಾರೆ. ಹೊ ಸ ನಿಯಮಗಳು ಫೆಬ್ರವರಿ 15 ರಿಂದ ಜಾರಿಗೆ ಬರಲಿವೆ.

Post a Comment