".

Header Ads

ಗಾಂಜಾ ದಂಧೆ - ಎಂಬಿಬಿಎಸ್ ವಿದ್ಯಾರ್ಥಿಗಳು ಸೇರಿ 9 ಮಂದಿಯ ಬಂಧನ


 ವೈದ್ಯರು, ವೈದ್ಯಕೀಯ ಮತ್ತು ದಂತ ವೈದ್ಯಕೀಯ ವಿದ್ಯಾರ್ಥಿಗಳು ಸೇರಿದಂತೆ ಗಾಂಜಾ ಚಲಾವಣೆ ಮತ್ತು ಸೇವನೆ ಆರೋಪದ ಮೇಲೆ ಒಂಬತ್ತು ಮಂದಿಯನ್ನು ಬಂಧಿಸಲಾಗಿದೆ ಎಂದು ನಗರ ಪೊಲೀಸ್ ಕಮಿಷನರ್ ಎನ್ . ಶಶಿಕುಮಾರ್ ಮಾಹಿತಿ ನೀಡಿದ್ದಾರೆ.

   ಇಬ್ಬರು ಕೇರಳ, ಪಂಜಾಬ್ ಮತ್ತು ದೆಹಲಿಯಿಂದ ಬಂದವರಾಗಿದ್ದು,  ಐವರು ಯುವಕರು ಮತ್ತು ನಾಲ್ವರು ಯುವತಿಯರನ್ನು ಬಂಧಿಸಲಾಗಿದ್ದು, ಅದರಲ್ಲಿ ಒಬ್ಬರು ತಮಿಳುನಾಡು ಮತ್ತು ಆಂಧ್ರಪ್ರದೇಶದವರು,  ಒಬ್ಬರು ಸ್ಥಳೀಯರಾಗಿದ್ದಾರೆ.

    ಬಂಧಿತ ಒಂಬತ್ತು ಮಂದಿಯಲ್ಲಿ ವಿದ್ಯಾರ್ಥಿಗಳು, ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕಾಲೇಜುಗಳ ವೈದ್ಯರು ಇದ್ದಾರೆ. ನಾಲ್ವರು ಯುವತಿಯರು ಎಂಬಿಬಿಎಸ್ ಮತ್ತು ಬಿಡಿಎಸ್ ಅಂತಿಮ ವರ್ಷ ವ್ಯಾಸಂಗ ಮಾಡುತ್ತಿದ್ದು, ಐವರು ಪುರುಷರಲ್ಲಿ ಇಬ್ಬರು ವೈದ್ಯಕೀಯ ಅಧಿಕಾರಿಗಳು ಮತ್ತು ಮೂವರು ಎಂಬಿಬಿಎಸ್ ಮತ್ತು ಬಿಡಿಎಸ್ ಓದುತ್ತಿರುವ ವಿದ್ಯಾರ್ಥಿಗಳು. ಪ್ರಕರಣದ ಬಗ್ಗೆಮಾತನಾಡಿದ ಮಂಗಳೂರು ನಗರ ಪೊಲೀಸ್ ಕಮಿಷನರ್
ಶಶಿಕುಮಾರ್ ಅವರು, 'ಜ.7 ರಂದು ಬಿಡಿಎಸ್ ವಿದ್ಯಾರ್ಥಿ, ಯುಕೆಯ ವಿದ್ಯಾರ್ಥಿ ಇದ್ದ ಫ್ಲ್ಯಾಟ್ ಮೇಲೆ ದಾಳಿ ಮಾಡಿ ಆತನಿಂದ ಎರಡು ಕೆ.ಜಿ ಗಾಂಜಾ, ಆಟಿಕೆ ಪಿಸ್ತೂಲ್, ಎರಡು ಮೊಬೈಲ್ ಫೋನ್ ಮತ್ತು ಡಿಜಿಟಲ್ ತೂಕ ಮಾಪನ ವಶಪಡಿಸಿಕೊಳ್ಳಲಾಗಿತ್ತು. ಆತನನ್ನು ವಿಚಾರಣೆ ನಡೆಸಿದ ಸಂದರ್ಭದಲ್ಲಿ ವೈದ್ಯರು  ಮತ್ತು ವೈದ್ಯಕೀಯ ವಿದ್ಯಾರ್ಥಿಗಳ ಗಾಂಜಾ ಸೇವನೆ ಮತ್ತು ಮಾರಾಟದ ಮಾಹಿತಿ  ಸಿಕ್ಕಿದೆ. ದಾಳಿ ನಡೆಸಿ ಮತ್ತೆ 9 ಮಂದಿಯನ್ನು  ಈ ದಿನ  ಬಂಧಿಸಲಾಗಿದೆ  .

 ಒಂಬತ್ತು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಅವರನ್ನು ಎರಡು ದಿನಗಳ ಪೊಲೀಸ್ ಕಸ್ಟಡಿಗೆ ಕಳುಹಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ


Powered by Blogger.