ಗುರುವಾರ ಬೆಳಗ್ಗೆ ಮುಂಬೈನಿಂದ 130 ಕಿ.ಮೀ ದೂರದಲ್ಲಿರುವ ರಾಯಗಢದ ರೆಪೋಲಿ ಗ್ರಾಮದಲ್ಲಿ ಮುಂಜಾನೆ 4.45ಕ್ಕೆ ಅಪಘಾತ ಸಂಭವಿಸಿದ್ದು, ಮುಂಬೈ-ಗೋವಾ ಹೆದ್ದಾರಿಯಲ್ಲಿ ವೇಗವಾಗಿ ಬಂದ ಟ್ರಕ್ ಒಂದು ವ್ಯಾನ್‌ಗೆ ಢಿಕ್ಕಿ ಹೊಡೆದು ಕನಿಷ್ಠ ಒಂಬತ್ತು ಜನರು ಸಾವನ್ನಪ್ಪಿದ್ದಾರೆ ಮತ್ತು ಮಗುವೊಂದು ಗಂಭೀರವಾಗಿ ಗಾಯಗೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ದುರ್ದೈವಿಗಳು ಎಲ್ಲಾ ಸಂಬಂಧಿಕರಾಗಿದ್ದು ವ್ಯಾನ್‌ನಲ್ಲಿ ರತ್ನಗಿರಿ ಜಿಲ್ಲೆಯ ಗುಹಾಗರ್‌ಗೆ ಹೋಗುತ್ತಿದ್ದರು .
ಟ್ರಕ್ ಮುಂಬೈ ಕಡೆಗೆ ಹೋಗುತ್ತಿತ್ತು. ಒಂಬತ್ತು ಜನರು ಮೃತಪಟ್ಟಿದ್ದು, . ಮೃತರಲ್ಲಿ ಒಂದು ಹೆಣ್ಣು ಮಗು, ಮೂವರು ಮಹಿಳೆಯರು ಮತ್ತು ಐವರು ಪುರುಷರು ಸೇರಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಮಾಹಿತಿ ತಿಳಿದ ಪೊಲೀಸರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ. ಅಪಘಾತದಲ್ಲಿ ಗಾಯಗೊಂಡ ನಾಲ್ಕು ವರ್ಷದ ಬಾಲಕಿಯನ್ನು ಮಂಗಾಂವ್‌ನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ .ಎಂದು ಪೊಲೀಸ್ ವರಿಷ್ಠಾಧಿಕಾರಿ ಸೋಮನಾಥ್ ಘರ್ಗೆ ತಿಳಿಸಿದ್ದಾರೆ.
join our whatsapp group
ಉಡುಪಿ ನ್ಯೂಸ್ ನಲ್ಲಿ ಜಾಹೀರಾತುಗಾಗಿ ಸಂಪರ್ಕಿಸಿ : ವಾಟ್ಸಪ್ ನಂಬರ್:- 8217755156
Post a Comment