".

Header Ads

ಕವಿ, ವಿಮರ್ಶಕ ಕೆ. ವಿ. ತಿರುಮಲೇಶ್‌ ಇನ್ನಿಲ್ಲ


ಕವಿ ಹಾಗೂ ವಿಮರ್ಶಕ ಕೆ.ವಿ. ತಿರುಮಲೇಶ್ (80) ಅವರು ಹೈದರಾಬಾದ್ನಲ್ಲಿರುವ ತಮ್ಮ ನಿವಾಸದಲ್ಲಿ ಸೋಮವಾರ ನಿಧನ ಹೊಂದಿದರು. ಹೈದರಾಬಾದ್ನ ಸೆಂಟ್ರಲ್ ಇನ್ಸ್ಟಿಟ್ಯೂಟ್ ಆಫ್ ಇಂಗ್ಲಿಷ್ ಆ್ಯಂಡ್ ಫಾರಿನ್ ಲಾಂಗ್ವೇಜಸ್ ಸಂಸ್ಥೆಯಲ್ಲಿ ಪ್ರಾಧ್ಯಾಪಕರಾಗಿ ಕೆಲಸ ಮಾಡಿ ನಿವೃತ್ತರಾಗಿದ್ದರು. 

ಸದ್ಯ ಹೈದರಾಬಾದಿನಲ್ಲಿ ವಾಸವಿದ್ದರು. ಕೇರಳದ ಕಾಸರಗೋಡಿನ ಕಾರಡ್ಕ ಗ್ರಾಮದಲ್ಲಿ ತಿರುಮಲೇಶ್ ಜನಿಸಿದ್ದರು. ಅಕ್ಷಯ ಕಾವ್ಯ, ಅರಬ್ಬಿ, ಪಾಪಿಯೂ, ಮುಖವಾಡಗಳು, ವಠಾರ ಸೇರಿ ಹಲವು ಕವನ ಸಂಕಲನ ಹೊ ರತಂದಿದ್ದರು. ಆರೋ ಪ, ಅನೇಕ, ಮುಸುಗು ಕಾದಂಬರಿ ಬರೆದಿದ್ದರು. ಬೇಂದ್ರೆಯವರ ಕಾವ್ಯಶೈಲಿ, ಸಮ್ಮುಖ, ಉಲ್ಲೇಖ, ಕಾವ್ಯಕಾರಣ ವಿಮರ್ಶಾ ಕೃತಿ ರಚಿಸಿದ್ದರು.ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಸೇರಿದಂತೆ ಹಲವು ಪ್ರಶಸ್ತಿಗಳು ಬಂದಿದ್ದವು.ಕವಿ, ಕತೆಗಾರ, ವಿಮರ್ಶಕ ಕೆ.ವಿ.ತಿರುಮಲೇಶ್ ಅವರ ಕುರಿತು ಸಾಹಿತಿ, ಪ್ರಾಧ್ಯಾಪಕ ಪುರುಷೋ ತ್ತಮ ಬಿಳಿಮಲೆಯವರು ಫೇಸ್ಬುಕ್ನಲ್ಲಿಬರೆದಿರುವ ಸಾಲುಗಳು– ಭಾಷೆಯ ಕುರಿತಾಗಿ ಅತ್ಯಂತ ಸೂಕ್ಷ್ಮವಾಗಿ ಮತ್ತುನವಿರಾಗಿ ಯೋಚಿಸಿ ಬರೆಯುತ್ತಿದ್ದ ಕೆಲವೇ ಕೆಲವರಲ್ಲಿಕೆ.ವಿ.ತಿರುಮಲೇಶ್ ಕೂಡಾ ಒಬ್ಬರು. 

ಅವರು ಕವಿ, ಕತೆಗಾರ, ಅನುವಾದಕ, ಭಾಷಾ ವಿಜ್ಞಾನಿ, ಮತ್ತುವಿಮರ್ಶಕ. ಅವರು ಕಾಸರಗೋ ಡಿನಲ್ಲಿದ್ದಾಗ ನಮಗೆಲ್ಲಬಹಳ ಹತ್ತಿರದವರಾಗಿದ್ದರು.  ಕಳೆ ದ ಸುಮಾರು 50 ವರ್ಷಗಳಿಂದ ತಿರುಮಲೇಶ್ ಬರೆಯುತ್ತಲೇ ಇದ್ದರು. ‘ಮುಖವಾಡಗಳು’ ಹಾಗೂ ‘ವಠಾರ’ ಕವನ ಸಂಕಲನಗಳ ಮೂಲಕ ಅವರು ನವ್ಯ ಕಾಲಘಟ್ಟದಲ್ಲಿಜನಪ್ರಿಯರಾದರು. ಅಕ್ಷಯ ಕಾವ್ಯ, ಮಹಾಪ್ರಸ್ಥಾನ, ಅವಧ, ಪಾಪಿಯೂ ಆರೋ ಪ, ಮುಸುಗು, ಕಳ್ಳಿಗಿಡದ ಹೂವು, ಸಮ್ಮುಖ, ಕಾವ್ಯಕಾರಣ ಇವರ ಇತರ ಮುಖ್ಯ ಕೃತಿಗಳು. ಕಲಿಗುಲ ಮತ್ತುಟೈಬೀರಿಯಸ್ ಅವರಿಗೆ ಹೆಸರು ತಂದುಕೊಟ್ಟ ನಾಟಕಗಳು. ಡಾನ್ ಕ್ವಿಕ್ಸಾಟನ ಸಾಹಸಗಳು ಮತ್ತುಗಂಟೆ ಗೋ ಪುರ ಅವರ ಒಳ್ಳೆ ಯ ಅನುವಾದಗಳು. ಬೇಂದ್ರೆಯವರ ಕಾವ್ಯಶೈಲಿ, ನಮ್ಮ ಕನ್ನಡ, ಮತ್ತುಅಸ್ತಿತ್ವವಾದ ಇವರ ಮುಖ್ಯ ವಿಮರ್ಶಾ ಕೃತಿಗಳು. ದೊ ಡ್ಡಲೇಖಕನೊ ಬ್ಬ ತೀರಿಕೊಂಡಾಗ ಸಹಜವಾಗಿ ಒಂದು ಬಗೆಯ ನಿರ್ವಾತ ಉಂಟಾಗುತ್ತದೆ. ಅದನ್ನು ಯಾರಾದರೂ ತುಂಬಿಸುವವರೆಗೆ ನಾವೆಲ್ಲಕಾಯಬೇಕಾಗುತ್ತದೆ.

Powered by Blogger.