ವಿಶ್ವದ ಅತ್ಯಂತ ಹಿರಿಯ ಮಹಿಳೆ ಲುಸಿಲ್ ರಾಂಡನ್ ನಿಧನ
ವಿಶ್ವದ ಅತ್ಯಂತ ಹಿರಿಯ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದ ಫ್ರೆಂಚ್ ಸನ್ಯಾಸಿನಿ ಲುಸಿಲ್ ರಾಂಡನ್ ಅವರು ತಮ್ಮ 118ನೇ ವಯಸ್ಸಿನಲ್ಲಿ ನಿಧನರಾದರು ಎಂದು ಸೇಂಟ್ ಕ್ಯಾಥರೀನ್ ಲೇಬರ್ ನರ್ಸಿಂಗ್ ಹೋಮ್‌ನ ವಕ್ತಾರ ಡೇವಿಡ್ ತವೆಲ್ಲಾ ಎಎಫ್‌ಪಿಗೆ ತಿಳಿಸಿದ್ದಾರೆ. ಕೇನ್ ನಿಧನದ ಬಳಿಕ ಭೂಮಿಯ ಮೇಲೆ ಬದುಕಿರುವ ಅತ್ಯಂತ ಹಿರಿಯ ಮಹಿಳೆ ಎಂಬ ಖ್ಯಾತಿಗೆ ಪಾತ್ರರಾದರು. ಏಪ್ರಿಲ್ 2022ರಲ್ಲಿ ಗಿನ್ನೆಸ್ ದಾಖಲೆಗೆ ಅವರ ಹೆಸರು ಸೇರ್ಪಡೆಯಾಗಿತ್ತು.
ಸಿಸ್ಟರ್ ಆಯಂಡ್ರೆ ಎಂದು ಕರೆಯಲ್ಪಡುತ್ತಿದ್ದ ರಾಂಡನ್ ಅವರು, ಫೆಬ್ರವರಿ 11, 1904ರಂದು ದಕ್ಷಿಣ ಫ್ರಾನ್ಸ್‌ನಲ್ಲಿ ಮೊದಲ ಮಹಾಯುದ್ಧ ಆರಂಭಕ್ಕೂ ಒಂದು ದಶಕಕ್ಕೂ ಮುನ್ನ ಜನಿಸಿದ್ದರು.
ಟೌಲೋನ್‌ನಲ್ಲಿರುವ ತಮ್ಮ ನರ್ಸಿಂಗ್ ಹೋಮ್‌ನಲ್ಲಿ ನಿದ್ರೆಯಲ್ಲಿದ್ದಾಗಲೇ ಅವರು ಇಹಲೋಕ ತ್ಯಜಿಸಿದ್ದಾರೆ ಎಂದು ವಕ್ತಾರ ಡೇವಿಡ್ ತಿಳಿಸಿದ್ದಾರೆ.

Post a Comment