".

Header Ads

ಯಶಸ್ವಿನಿ ಯೋಜನೆ' ಫಲಾನುಭವಿಗಳಿಗೆ ಗುಡ್ ನ್ಯೂಸ್ : ಚಿಕಿತ್ಸಾ ದರ ಹೆಚ್ಚಳ

 ಯಶಸ್ವಿನಿ ಯೋಜನೆ ಫಲಾನುಭವಿಗಳಿಗೆ ರಾಜ್ಯ ಸರ್ಕಾರ ಸಿಹಿಸುದ್ದಿಯೊಂದನ್ನು ನೀಡಿದ್ದು, ಯಶಸ್ವಿನಿ ಯೋಜನೆಯಡಿಯಲ್ಲಿ ಬರುವ ಚಿಕಿತ್ಸಾ ದರ ಪರಿಷ್ಕರಿಸಲು ರಾಜ್ಯ ಸರ್ಕಾರ ಒಪ್ಪಿಗೆ ಸೂಚಿಸಿದೆ.


ಗ್ರಾಮೀಣ ಸಹಕಾರ ಸಂಘಗಳ, ಸ್ವ-ಸಹಾಯ ಗುಂಪುಗಳ ಗರಿಷ್ಟ ನಾಲ್ಕು ಸದಸ್ಯರ ಕುಟುಂಬ ಒಂದಕ್ಕೆ ವಾರ್ಷಿಕ ರೂ.500/ - ಗಳ ವಂತಿಗೆ ಮತ್ತು ಹೆಚ್ಚುವರಿ ಪ್ರತಿಯೊಬ್ಬ ಸದಸ್ಯರಿಗೆ ರೂ.100/ - ಗಳನ್ನು ಪಾವತಿಸಬೇಕು. ನಗರ ಸಹಕಾರ ಸಂಘಗಳ ಗರಿಷ್ಠ ನಾಲ್ಕು ಸದಸ್ಯರ ಕುಟುಂಬ ಒಂದಕ್ಕೆ ರೂ.1,000/ - ಗಳ ವಂತಿಗೆ ಮತ್ತು ಹೆಚ್ಚುವರಿ ಪ್ರತಿಯೊಬ್ಬ ಸದಸ್ಯರಿಗೆ ರೂ.200/ - ಗಳನ್ನು ಪಾವತಿಸಬೇಕು.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸದಸ್ಯರಿಗೆ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪ ಯೋಜನೆಯಡಿ ಸಹಾಯಧನ ನೀಡುವ ಮೂಲಕ ಅವರ ವಾರ್ಷಿಕ ಸದಸ್ಯತ್ವದ ವಂತಿಗೆಯನ್ನು ಸರ್ಕಾರವೇ ಭರಿಸುತ್ತದೆ.

Powered by Blogger.