ಅಪಘಾತದಲ್ಲಿ ಗಾಯಗೊಂಡಿದ್ದ ಅರವಿಂದ ಬೋಳಾರ್ ಆರೋಗ್ಯವಾಗಿದ್ದೇನೆ ತುಳುನಾಡ ಮಾಣಿಕ್ಯ ಪ್ರತಿಕ್ರಿಯೆ....!
ಖ್ಯಾತ ತುಳು ಸಿನಿಮಾಗಳ ಹಾಸ್ಯ ಕಲಾವಿದ ಅರವಿಂದ ಬೋಳಾರ್ ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಮಂಗಳೂರಿನ ಪಂಪ್ ವೆಲ್ ರಸ್ತೆಯಲ್ಲಿ ಅವಘಡ ಸಂಭವಿಸಿದ್ದು,
ಪಂಪ್ ವೆಲ್ ಸಮೀಪ ದ್ವಿಚಕ್ರ ವಾಹನ ಸ್ಕಿಡ್ ಆಗಿರುವ ಪರಿಣಾಮದಿಂದಾಗಿ ರಸ್ತೆಗೆ ಬಿದ್ದ ಬೋಳಾರ್ ಅವರಿಗೆ ಅಲ್ಪ ಗಾಯಗಳಾಗಿತ್ತು. ತಕ್ಷಣ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಅವರು ಪ್ರತಿಕ್ರಿಯೆ ನೀಡಿದ್ದಾರೆ. ದ್ವಿಚಕ್ರ ವಾಹನ ಸ್ಕಿಡ್ ಆಗಿ ಅಪಘಾತವಾಗಿದೆ. ಆದರೆ, ನನಗೆ ಏನೂ ಆಗಿಲ್ಲ. ನಾನು ಆರೋಗ್ಯವಾಗಿದ್ದೇನೆ. ಹೆಲ್ಮೆಟ್ ಧರಿಸಿದ ಹಿನ್ನೆಲೆಯಲ್ಲಿ ಹೆಚ್ಚಿನ ಅಪಾಯದಿಂದ ಪಾರಾಗಿದ್ದೇನೆ. ಇಲ್ಲದಿದ್ದಲ್ಲಿ ಸ್ವಲ್ಪ ಕಷ್ಟವಿತ್ತು. ಆದರೆ, ಸದ್ಯ ನಿಮ್ಮ ಆಶೀರ್ವಾದದಿಂದ ಆರೋಗ್ಯವಾಗಿದ್ದೇನೆ. ಎಂದು ಅವರು ಪ್ರತಿಕ್ರಿಯೆ ನೀಡಿದ್ದಾರೆ.

Post a Comment