".

Header Ads

ಲಾರಿ ಓವರ್ ಟೇಕ್ ಮಾಡುವ ಯತ್ನದಲ್ಲಿ ಬೈಕ್ ಲಾರಿಗೆ ಢಿಕ್ಕಿ ವಿದ್ಯಾರ್ಥಿಗಳಿಬ್ಬರು ಅಪಘಾತದಲ್ಲಿ ಮೃತ್ಯು


ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಭವಿಸಿದ  ದೂಪದಕಟ್ಟೆ ಬಳಿ  ರಸ್ತೆ ಅಪಘಾತದಲ್ಲಿ ವಿದ್ಯಾರ್ಥಿಗಳು ಮೃತಪಟ್ಟ ಘಟನೆ ಮಂಗಳವಾರ ರಾತ್ರಿ 9 ಗಂಟೆ ಸುಮಾರಿಗೆ ನಡೆದಿದೆ.

    ಮೃತರನ್ನು ಮೂಲತಃ ಶಿವಮೊಗ್ಗ ನಿವಾಸಿ ಸಮಿತ್ ಕುಮಾರ್(19) ಹಾಗೂ ಸಾಲಿಗ್ರಾಂ ಚಿತ್ರಪಾಡಿ ನಿವಾಸಿ ವಾಗೀಶ್ ಕೆದ್ಲಾಯ(19) ಎಂದು ಗುರುತಿಸಲಾಗಿದೆ. ಸುಮಿತ್ ಮತ್ತು ವಾಗೀಶ್ ಇಬ್ಬರದೂ ಬಡ ಕುಟುಂಬವಾಗಿದ್ದು, ಹಗಲು ಸಿಎ ಅಭ್ಯಾಸ ನಡೆಸುತ್ತಿದ್ದರೆ, ಸಂಜೆ ತರಗತಿ ಮೂಲಕ ಬಿ.ಕಾಂ ವ್ಯಾಸಂಗ ಮಾಡುತ್ತಿದ್ದರು. ಪ್ರಸ್ತುತ ಎರಡನೇ ವರ್ಷದ ವಿದ್ಯಾರ್ಥಿಗಳಾಗಿದ್ದರು ಇವರಿಬ್ಬರು ಉಡುಪಿಯ ಪೂರ್ಣಪ್ರಜ್ಞ ಸಂಧ್ಯಾ ಕಾಲೇಜಿನ ವಿದ್ಯಾರ್ಥಿಗಳಾಗಿದ್ದರು.

 

ವರದಿಗಳ ಪ್ರಕಾರ, ಇಬ್ಬರು ವಿದ್ಯಾರ್ಥಿಗಳು ಬೈಕ್ ನಲ್ಲಿ ಕಾಲೇಜಿನಿಂದ ಮನೆಗೆ ಹೋಗುತ್ತಿದ್ದಾಗ ಓವರ್‌ಟೇಕ್ ಮಾಡುವ ಪ್ರಯತ್ನದಲ್ಲಿ ಬೈಕ್ ಲಾರಿಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಈ ಸಂಬಂಧ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Powered by Blogger.