".

Header Ads

ನೂಪುರ್ ಶರ್ಮಾಗೆ ಗನ್ ಲೈಸೆನ್ಸ್‌

ಜೀವ ಬೆದರಿಕೆ ಹಿನ್ನೆಲೆಯಲ್ಲಿ ಪ್ರವಾದಿ ಮಹಮ್ಮದ್ ಅವರ ಕುರಿತು  ವಿವಾದಾತ್ಮಕವಾಗಿ ಹೇಳಿಕೆ ನೀಡಿದ್ದ ಬಿಜೆಪಿ ಮಾಜಿ ವಕ್ತಾರೆ ನೂಪುರ್ ಶರ್ಮಾ ಅವರಿಗೆ ಬಂದೂಕು ಪರವಾನಗಿ ನೀಡಲಾಗಿದೆ.

ಪ್ರವಾದಿ ಮಹಮ್ಮದ್ ಕುರಿತು ವಿವಾದಾತ್ಮಕ ಹೇಳಿಕೆ ನೀಡಿ ವ್ಯಾಪಕ ಆಕ್ರೋಶಕ್ಕೆ ತುತ್ತಾಗಿದ್ದ ಈಕೆ ಜೀವ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಗನ್ ಲೈಸೆನ್ಸ್‌ಗೆ ಅರ್ಜಿ ಸಲ್ಲಿಸಿದ್ದರು.

ನೂಪುರ ಶರ್ಮಾ ಹೇಳಿಕೆ ವಿರುದ್ಧ ನಡೆದ ಪ್ರತಿಭಟನೆಗಳು ಹಿಂಸಾಚಾರಕ್ಕೆ ತಿರುಗಿದ ಬೆನ್ನಲ್ಲೇ, ಅನೇಕ ಜೀವ ಬೆದರಿಕೆಗಳು ಅವರಿಗೆ ಬಂದಿದ್ದವು. ಇದೀಗ ಮಾಜಿ ವಕ್ತಾರೆ ನೂಪುರ್ ಶರ್ಮಾ ಅವರು ವೈಯಕ್ತಿಕ ಬಂದೂಕು ಕೊಂಡೊಯ್ಯುವ ಪರವಾನಗಿ ಪಡೆದುಕೊಂಡಿದ್ದಾರೆ.

ಟೆಲಿವಿಷನ್ ಕಾರ್ಯಕ್ರಮವೊಂದರಲ್ಲಿ ಪ್ರವಾದಿ ಮಹಮ್ಮದ್ ಕುರಿತು ನೂಪುರ್ ನೀಡಿದ್ದ ಹೇಳಿಕೆ ರಾಜಕೀಯ ಕೋಲಾಹಲ ಸೃಷ್ಟಿಸಿತ್ತು. ಮುಸ್ಲಿಂ ದೇಶಗಳು ಬಹಿರಂಗವಾಗಿ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದವು. ದೇಶದ ಅನೇಕ ಭಾಗಗಳಲ್ಲಿ ಪ್ರತಿಭಟನೆ, ಹಿಂಸಾಚಾರಗಳು ನಡೆದಿದ್ದವು. ಇದರ ಬಳಿಕ ಬೇಷರತ್ ಕ್ಷಮೆ ಯಾಚಿಸಿದ್ದ ನೂಪುರ್, ವಿವಾದಾತ್ಮಕ ಹೇಳಿಕೆಯನ್ನು ಹಿಂದಕ್ಕೆ ಪಡೆದುಕೊಂಡಿದ್ದರು. 

Powered by Blogger.