".

Header Ads

ರಾಜ್ಯದ ವಿವಿಧೆಡೆ ವರ್ಷದ ಮೊದಲ ಮಳೆಯ ಸಿಂಚನ, ಹಲವೆಡೆ ಬಿರುಸಿನ ಮಳೆ


ಮಡಿಕೇರಿ ನಗರವೂ ಸೇರಿದಂತೆ ಕೊಡಗು ಜಿಲ್ಲೆಯ ಭಾಗಮಂಡಲ, ಸಂಪಾಜೆ ಸಮೀಪದ ಚೆಂಬು, ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರ, ಅಮ್ಮತ್ತಿ, ಸೋಮವಾರಪೇಟೆ ಭಾಗದಲ್ಲಿ ಮಳೆ ಸುರಿದಿದೆ   ಕೊಡಗು, ಚಿಕ್ಕಮಗಳೂರು, ಚಾಮರಾಜನಗರ, ಮೈಸೂರು ಮತ್ತು ಮಂಡ್ಯ ಜಿಲ್ಲೆಯ ವಿವಿಧೆಡೆ ಮಂಗಳವಾರ ಬಿರುಸಿನ ಮಳೆಯಾಗಿದೆ.
 

ಜ.27ರಿಂದ ಫೆ.2ರವರೆಗೆ ಸರಾಸರಿಗಿಂತ ಹೆಚ್ಚು ಮಳೆಯಾಗುವ ಸಂಭವ ಇದೆ ಎಂದು ಭಾರತೀಯ ಹವಾಮಾನ ಇಲಾ
ಖೆಯ ನಾಗನಹಳ್ಳಿಯ ಕೃಷಿ ಹವಾಮಾನ ಕ್ಷೇತ್ರ ವಿಭಾಗದ ಪ್ರಕಟಣೆ ತಿಳಿಸಿದೆ. ಚಾಮರಾಜನಗರ ,ಯಳಂದೂರು , ಮೈಸೂರು ನಗರದಲ್ಲಿ ಹಾಗೂ ಮಂಡ್ಯದ ಶ್ರೀರಂಗಪಟ್ಟಣದಲ್ಲಿ ಸಾಧಾರಣ ಮಳೆಯಾಗಿದೆ.

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ, ಕೊಪ್ಪ, ಎನ್‌.ಆರ್.ಪುರ, ಶೃಂಗೇರಿ ತಾಲ್ಲೂಕಿನಲ್ಲೂ ಮಳೆಯಾಗಿದೆ. ಮೂಡಿಗೆರೆ ತಾಲ್ಲೂಕಿನ ಬೆಟ್ಟಗೆರೆ, ಫಲ್ಗುಣಿ, ಭಾರತೀಬೈಲ್, ಹುಲ್ಲೇಮನೆ ಸುತ್ತಲಿನ ಪ್ರದೇಶದಲ್ಲಿ ಬಿರುಸಾಗಿ ಸುರಿದಿದೆ ಎನ್‌.ಆರ್‌.ಪುರ, ಶೃಂಗೇರಿ ಭಾಗದಲ್ಲಿ ತುಂತುರು ಮಳೆಯಾಗಿದೆ.
Powered by Blogger.