".

Header Ads

ಕೊಲ್ಲೂರು ಸರಕಾರಿ ಪ್ರಾಥಮಿಕ ಶಾಲೆಯ ರಂಗಮಂದಿರದಲ್ಲಿ ಗಣರಾಜ್ಯೋತ್ಸವ ,ಪ್ರತಿಭಾ ಸಿಂಚನ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ

ಕೊಲ್ಲೂರು ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಗಣರಾಜ್ಯೋತ್ಸವ ಮತ್ತು ಪ್ರತಿಭಾ ಸಿಂಚನ ಕಾರ್ಯಕ್ರಮ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಶಾಲಾ ರಂಗಮಂದಿರದಲ್ಲಿ ಜನವರಿ 26ರಂದು ನಡೆಯಿತು. ಗಣರಾಜ್ಯೋತ್ಸವದ ಧ್ವಜಾರೋಹಣೆ ನೆರವೇರಿಸಿದ ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಯೋಗೀಶ್ ಭಟ್ ಗಣರಾಜ್ಯೋತ್ಸವದ ಸಂದೇಶ ನೀಡಿದರು.

ಕೊಲ್ಲೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀ ಶಿವರಾಮ ಕೃಷ್ಣ ಭಟ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಪ್ರತಿಭಾ ಸಿಂಚನ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಪಠ್ಯೇತರ ಚಟುವಟಿಕೆಗಳಲ್ಲಿ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಳ್ಳಬೇಕು.  

 

ಅದೇ ರೀತಿ ಸಾಂಸ್ಕೃತಿಕ ಮತ್ತು ಕಲಾ ಪ್ರದರ್ಶನದಲ್ಲಿ ತಾಲೂಕಿನ ಕೀರ್ತಿ, ರಾಜ್ಯಕ್ಕೆ ಪಸರಿಸುವ ಸಂಕಲ್ಪ ವಿದ್ಯಾರ್ಥಿಗಳಲ್ಲಿ ಬೆಳೆಯಬೇಕು ಎಂದು ತಿಳಿಸಿದರು. ಇದೇ ಸಂದರ್ಭದಲ್ಲಿ ಹಿಂದಿನ ಮತ್ತು ಇಂದಿನ ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷರು ಹಾಗೂ ಸದಸ್ಯರನ್ನು ಗುರುತಿಸಿ ಗೌರವಿಸಲಾಯಿತು.

ಶಾಲೆಯ ಶಿಕ್ಷಕ ಶಿಕ್ಷಕಿಯರನ್ನು ಶಾಲಾ ಅಭಿವೃದ್ಧಿ ಸಮಿತಿಯವರು ಗುರುತಿಸಿ ಗೌರವಿಸಿದರು. ಹಾಗೆಯೇ ದಾನಿಗಳಾದ ಜಯರಾಮ ಉಡುಪ ಅವರನ್ನು ಸನ್ಮಾನಿಸಲಾಯಿತು. ನೃತ್ಯ ತರಬೇತುದಾರಳಾದ ಶ್ರೇಯಾರವರನ್ನು ಗೌರವಿಸಲಾಯಿತು. ಸಾಂಸ್ಕೃತಿಕ ಹಾಗೂ ಕ್ರೀಡಾ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. 

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಕೊಲ್ಲೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಹರೀಶ್ ಕುಮಾರ್ ಶೆಟ್ಟಿ ಮತ್ತು ಗ್ರಾಮ ಪಂಚಾಯತ್ ಸದಸ್ಯರಾದ ನಾಗೇಶ್ ದಳಿ , ವನಿತಾ, ಪುಷ್ಪ, ಹೇಮಾ, ಪ್ರಸನ್ನ ಶರ್ಮ ಹಾಗೂ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಗೋಪಾಲಕೃಷ್ಣ ಜಿ ಬಿ, ಶಾಲಾ ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ ಜ್ಯೋತಿ ರಾಘವೇಂದ್ರ , ಸತ್ಯನಾರಾಯಣ ಅಡಿಗ, ಕೆ ವಿ ಶಾಜಿ , ಮಾಜಿ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ನೇತ್ರಾವತಿ ಮತ್ತು ಶಾಲಾ ಅಭಿವೃದ್ಧಿ ಸಮಿತಿಯ ಸರ್ವ ಸದಸ್ಯರು ಹಾಗೂ ಶಾಲಾ ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದದವರು ಉಪಸ್ಥಿತರಿದ್ದರು.

 ಶಾಲಾ ಮುಖ್ಯೋಪಾಧ್ಯಾಯರಾದ ಶಾರದಾ ಸ್ವಾಗತಿಸಿದರು, ಸಹ ಶಿಕ್ಷಕಿ ನಿರ್ಮಲ, ಶೈಲಜಾ, ಸುಮಿತ್ರಾ ಮತ್ತು ರಾಜೇಶ್ವರಿ ನಿರೂಪಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ವಾಸು ವಂದಿಸಿದರು. ತದ ನಂತರ ಶಾಲಾ ವಿದ್ಯಾರ್ಥಿಗಳಿಂದ ನೃತ್ಯ ವೈಭವ, ನಾಟಕ, ಪ್ರಹಸನ ಪ್ರದರ್ಶನಗೊಂಡಿತು.









Powered by Blogger.