ಉಡುಪಿ,ಸುದ್ದಿ:- ಇ-ಶ್ರಮ್ ನಲ್ಲಿ ನೊಂದಾಯಿಸಿ – ಕೂರ್ಮಾರಾವ್ ಎಂ ಮನವಿ
ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಕಾರ್ಮಿಕ ಇಲಾಖೆಯ ವಿವಿದ ಸಮಿತಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಇವರು ಅಸಂಘಟಿತ ಕಾರ್ಮಿಕರು ಹಾಗೂ ವಲಸೆ ಕಾರ್ಮಿಕರಿಗೆ ಸಾಮಾಜಿಕ ಭದ್ರತಾ ಯೋಜನೆಗಳನ್ನು ರೂಪಿಸಲು, ಕಾರ್ಮಿಕರ ದತ್ತಾಂಶವನ್ನು ಇ-ಶ್ರಮ್ ನಲ್ಲಿ 379 ವಿವಿಧ ವರ್ಗಗಳ ಕಾರ್ಮಿಕರ ನೊಂದಣಿ ನಡೆಯುತ್ತಿದ್ದು, ಇದರಲ್ಲಿ ಪ್ರತಿಯೊಬ್ಬರೂ ನೊಂದಾಯಿಸಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಹೇಳಿದರು
ಇ-ಶ್ರಮ್ ನಲ್ಲಿ ನೊಂದಾಯಿಸಿಕೊಳ್ಳುವುದರಿಂದ ಮುಂದಿನ ದಿನಗಳಲ್ಲಿ ಸರ್ಕಾರ ಜಾರಿಗೆ ತರಲಿರುವ ಸಾಮಾಜಿಕ ಭದ್ರತಾ ಯೋಜನೆಗಳನ್ನು ಪಡೆದುಕೊಳ್ಳಲು ಅನುಕೂಲವಾಗಲಿದೆ ಎಂದ ಅವರು , ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು, ಕೃಷಿ ಕಾರ್ಮಿಕರು, ಮೀನುಗಾರರು, ಆಶಾ ಕಾರ್ಯಕರ್ತೆಯರು, ಮನೆ ಕೆಲಸದವರು, ಚಾಲಕರು, ಟೈಲರ್ ಗಳು , ಬೀದಿ ಬದಿ ವ್ಯಾಪಾರಿಗಳು ನೊಂದಾಯಿಸಿಕೊಳ್ಳಬೇಕು ಎಂದರು. ವ್ಯಾಪಾರಿಗಳು ಹಾಗೂ ಸ್ವಯಂ ಉದ್ಯೋಗಿಗಳಿಗೆ ರಾಷ್ಟ್ರೀಯ ಪಿಂಚಣಿ ಯೋಜನೆಯಡಿ ವಂತಿಗೆ ಆಧಾರಿತ ಪಿಂಚಣಿ ಯೋಜನೆಯನ್ನು ಕೇಂದ್ರ ಸರ್ಕಾರ ಜಾರಿಗೆ ತಂದಿದ್ದು , 18-40 ವರ್ಷದೊಳಗಿನ ಅಂಗಡಿ ಮಾಲಿಕರು, ಚಿಲ್ಲರೆ ವ್ಯಾಪಾರಿಗಳು, ಅಕ್ಕಿ ಎಣ್ಣೆ ಗಿರಣಿ ಮಾಲೀಕರು, ವರ್ಕ್ ಶಾಪ್ ಮಾಲೀಕರು, ಕಮಿಷನ್ ಎಜೆಂಟ್ ಗಳು, ರಿಯಲ್ ಎಸ್ಟೇಟ್ ಬ್ರೋಕರ್ಗಳು, ಸಣ್ಣ ಹೋಟೆಲ್ ರೆಸ್ಟೋರೆಂಟ್ಗಳ ಮಾಲೀಕರು ಸೇರಿದಂತೆ ಇತರೆ ಸಣ್ಣ ವ್ಯಾಪಾರಗಳಲ್ಲಿ ತೊಡಗಿಕೊಂಡ ಸ್ವಯಂ ಉದ್ಯೋಗಿಗಳು ಇದರ ಲಾಭ ಪಡೆದುಕೊಳ್ಳಬಹುದಾಗಿದೆ ಎಂದರು.

Post a Comment