ಮನೆಗೆ ನುಗ್ಗಿ ದುಷ್ಕರ್ಮಿ ಚೂರಿ ಇರಿದು ಪರಾರಿ - ಯುವತಿ ಮೃತ್ಯು
23 ವರ್ಷದ ಯುವತಿಗೆ ವ್ಯಕ್ತಿಯೊಬ್ಬ ಮನೆಯಂಗಳದಲ್ಲೇ ಚೂರಿ ಇರಿದು ಪರಾರಿಯಾದ ಘಟನೆ ಇವತ್ತು ಮುಂಡೂರು ಸಮೀಪದ ಕಂಪದಲ್ಲಿ ನಡೆದಿದೆ. ಮೃತ ಯುವತಿಯನ್ನು ಮುಂಡೂರು ಕಂಪ ನಿವಾಸಿ ದಿ.ಗುರುವಪ್ಪ ಮತ್ತು ದೇವಕಿ ದಂಪತಿಗಳ ಪುತ್ರಿ ಜಯಶ್ರೀ (23) ಎಂದು ಗುರುತಿಸಲಾಗಿದೆ. ಆಸ್ಪತ್ರೆಗೆ ಸಾಗಿಸುವಾಗ ದಾರಿ ಮಧ್ಯೆ ಯುವತಿ ಸಾವನ್ನಪ್ಪಿದ್ದಾಳೆ ಎನ್ನಲಾಗಿದೆ. ಜಯಶ್ರೀ ಈ ಮೊದಲು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದು, ಕೆಲ ಸಮಯದಿಂದ ಕೆಲಸ ಬಿಟ್ಟು ಮನೆಯಲ್ಲಿಯೇ ಇದ್ದಳು ಎಂದು ತಿಳಿದು ಬಂದಿದೆ.
ಯುವತಿಯ ಮೃತದೇಹವನ್ನು ಪುತ್ತೂರಿನ ಸರಕಾರಿ ಆಸ್ಪತ್ರೆಯಲ್ಲಿರಿಸಲಾಗಿದ್ದು, ಪೊಲೀಸರು ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.
Post a Comment