ಗ್ಯಾಸ್ ಸಿಲಿಂಡರ್ ಸ್ಫೋಟ: ಜೀವಂತ ಸುಟ್ಟು ಹೋದ ಇಡೀ ಕುಟುಂಬ !!
ಲಿಂಡರ್ ಸೋರಿಕೆಯಿಂದ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಪಶ್ಚಿಮ ಬಂಗಾಳದಿಂದ ವಲಸೆ ಬಂದು ನೆಲೆಸಿದ್ದ ಇಡೀ ಕುಟುಂಬವೇ ಬೆಂಕಿಗಾಹುತಿಯಾದ ಘಟನೆ ನಡೆದಿದೆ.
ಮನೆಯಲ್ಲಿ ವಾಸವಿದ್ದ ದಂಪತಿ ಹಾಗೂ ನಾಲ್ವರು ಮಕ್ಕಳು ಸಜೀವ ದಹನವಾಗಿದ್ದಾರೆ. 45 ವರ್ಷದ ಅಬ್ದುಲ್, 40 ವರ್ಷ ಪತ್ನಿ ಹಾಗೂ 18 ಹಾಗೂ 16 ವರ್ಷದ ಇಬ್ಬರು ಹೆಣ್ಣು ಮಕ್ಕಳು, 12 ಹಾಗೂ 10 ವರ್ಷದ ಇಬ್ಬರು ಗಂಡು ಮಕ್ಕಳು ಮೃತಪಟ್ಟವರು ಎಂದು ಪೊಲೀಸ್ ಇನ್ಸ್‌ಪೆಕ್ಟರ್ ಫೂಲ್ ಕುಮಾರ್ ಮಾಹಿತಿ ನೀಡಿದ್ದಾರೆ. ಈ ದಂಪತಿ ಪಾಣಿಪತ್‌ನಲ್ಲಿರುವ ಫ್ಯಾಕ್ಟರಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು.
ಮನೆಯಿಂದ ಹೊಗೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅಕ್ಕಪಕ್ಕದ ನಿವಾಸಿಗಳು ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಅಗ್ನಿ ಶಾಮಕ ಸಿಬ್ಬಂದಿ ಸ್ಥಳಕ್ಕಾಗಮಿಸಿ ರಕ್ಷಣಾ ಕಾರ್ಯಾಚರಣೆ ನಡೆಸುವಷ್ಟರಲ್ಲಿ ಎಲ್ಲರೂ ಸುಟ್ಟು ಕರಕಲಾಗಿದ್ದರು. ಟೀ ಮಾಡಲು ಗ್ಯಾಸ್ ಹೊತ್ತಿಸಿದಾಗ ಈ ದುರಂತ ಸಂಭವಿಸಿದ್ದು, ಹೊಗೆಯಿಂದ ಉಸಿರುಕಟ್ಟಿಯೇ ಆರು ಜನ ಅಸು ನೀಗಿದ್ದಾರೆ.

Post a Comment