".

Header Ads

ಮಂಗಳೂರು ಗ್ರಾಮಾಂತರ ಠಾಣೆಯ ಪೊಲೀಸ್ ಕಾನ್‌ಸ್ಟೇಬಲ್ ಗಳ ಮೇಲೆ ಕಲ್ಲು ತೂರಾಟ


ಮಂಗಳೂರು ಗ್ರಾಮಾಂತರ ಠಾಣೆಯ ಪೊಲೀಸ್ ಕಾನ್‌ಸ್ಟೇಬಲ್  ಪ್ರದೀಪ್ ನಾಗನ ಗೌಡ ಮತ್ತು ಮಲ್ಲಿಕಾರ್ಜುನ ಅಂಗಡಿರೊಂದಿಗೆ ಕರ್ತವ್ಯ ನಿರತರಾಗಿದ್ದಾಗ ಜ.20 ರಂದು ತುಪ್ಪೆಕಲ್ಲಿನ ಕಾಂಕ್ರಿಟ್ ರಸ್ತೆಯ ಬಳಿಯ ಖಾಲಿ ಸ್ಥಳದಲ್ಲಿ ಮಾರುತಿ ಸುಝುಕಿ ಬಿಳಿ ಬಣ್ಣದ ಆಲ್ಟೋ ಕಾರೊಂದರ ಬಳಿ ಇಬ್ಬರು ಅಪರಿಚಿತರು ನಿಂತಿದ್ದರು. ಹಾಗೂ ಕಾರಿನೊಳಗೆ ಮೂವರಿದ್ದರು ಎನ್ನಲಾಗಿದೆ.

   ಇವರು ಕರ್ತವ್ಯ ನಿರತದಲ್ಲಿದ್ದ ಮಲ್ಲಿಕಾರ್ಜುನ ಅಂಗಡಿಯವರು ಅವರನ್ನು ಪ್ರಶ್ನಿಸಿದಾಗ ಅವರು ಏಕಾಏಕಿ ಕಲ್ಲುಗಳನ್ನು ಪೊಲೀಸರತ್ತ ಎಸೆದು, ಕಾರನ್ನು ಪೊಲೀಸರ ಮೇಲೆ ಹತ್ತಿಸಲು ಯತ್ನಿಸಿದ್ದಾರೆ. ಈ ವೇಳೆ ಇಬ್ಬರೂ ರಸ್ತೆಯ ಪಕ್ಕಕ್ಕೆ ಹಾರಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ ,ಆರೋಪಿಗಳು ಕರ್ತವ್ಯಕ್ಕೆ ಅಡ್ಡಿಪಡಿಸಿ ಕಲ್ಲು ಎಸೆದು, ಕಾರು ಹಾಯಿಸಿ, ಕೊಲೆಗೆ ಯತ್ನಿಸಿರುವುದಾಗಿ ನೀಡಿದ ದೂರಿನಂತೆ ಪ್ರಕರಣ  ಆರೋಪಿಗಳ ವಿರುದ್ಧ ಎಫ್‍ಐಆರ್ ದಾಖಲಿಸಿದ್ದರು.
Powered by Blogger.