ಹೈಕೋರ್ಟ್ ಮಹತ್ವದ ಆದೇಶ :- ಖಾಸಗಿ ಶಾಲೆಗಳಿಗೆ ಶುಲ್ಕ ನಿಗದಿಪಡಿಸುವ ಅಧಿಕಾರ ರಾಜ್ಯ ಸರ್ಕಾರಕ್ಕಿಲ್ಲ
ಕರ್ನಾಟಕ ಖಾಸಗಿ ಶಾಲೆಗಳ ಸಮಿತಿ ಸೇರಿದಂತೆ ಮತ್ತಿತರ ಶಾಲಾ ಆಡಳಿತ ಮಂಡಳಿಗಳು ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾ. ಇ.ಎಸ್.ಇಂದಿರೇಶ್ ಅವರಿದ್ದ ನ್ಯಾಯಪೀಠ ಈ ಆದೆಶ ನೀಡಿದೆ. ಇದರಿಂದ ಖಾಸಗಿ ಅನುದಾನ ರಹಿತ ಶಿಕ್ಷಣ ಸಂಸ್ಥೆಗಳನ್ನು ಶುಲ್ಕ ವಿಧಿಸುವುದನ್ನು ನಿಯಂತ್ರಿಸುವುದಕ್ಕೆ ಸರ್ಕಾರಕ್ಕೆ ಇದ್ದ ಅಧಿಕಾರ ರದ್ದಾದಂತಾಗಿದೆ.
ಖಾಸಗಿ ಅನುದಾನ ರಹಿತ ಶಾಲೆಗಳು ರಾಜ್ಯ ಸರ್ಕಾರ ನಿಗದಿ ಪಡಿಸಿದ ರೀತಿಯಲ್ಲಿ ಶುಲ್ಕ ಪಡೆಯುವುದನ್ನು ಕಡ್ಡಾಯಪಡಿಸುವ ಹಾಗೂ ಉಲ್ಲಂಘಿಸಿದರೆ ಶಿಕ್ಷೆ ವಿಧಿಸುವ ಕರ್ನಾಟಕ ಶಿಕ್ಷಣ ಕಾಯಿದೆ 1983ರ ಕೆಲ ಸೆಕ್ಷನ್ ಗಳನ್ನು ಹೈಕೋರ್ಟ್ ಅಸಾಂವಿಧಾನಿಕ ಎಂದು ಹೈಕೋರ್ಟ್ ಹೇಳಿದೆ. ಬೆಂಗಳೂರು: ಖಾಸಗಿ ಶಾಲೆಗಳಿಗೆ ಶುಲ್ಕ ನಿಗದಿ ಅಧಿಕಾರ ರಾಜ್ಯ ಸರ್ಕಾರಕ್ಕಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಏಕಸದಸ್ಯ ಪೀಠ ಮಹತ್ವದ ಆದೇಶ ಹೊರಡಿಸಿದೆ. ಖಾಸಗಿ ಅನುದಾನ ರಹಿತ ಶಾಲೆಗಳು ರಾಜ್ಯ ಸರ್ಕಾರ ನಿಗದಿ ಪಡಿಸಿದ ರೀತಿಯಲ್ಲಿ ಶುಲ್ಕ ಪಡೆಯುವುದನ್ನು ಕಡ್ಡಾಯಪಡಿಸುವ ಹಾಗೂ ಉಲ್ಲಂಘಿಸಿದರೆ ಶಿಕ್ಷೆ ವಿಧಿಸುವ ಕರ್ನಾಟಕ ಶಿಕ್ಷಣ ಕಾಯಿದೆ 1983ರ ಕೆಲ ಸೆಕ್ಷನ್ ಗಳನ್ನು ಹೈಕೋರ್ಟ್ ಅಸಾಂವಿಧಾನಿಕ ಎಂದು ಹೈಕೋರ್ಟ್ ಹೇಳಿದೆ.

Post a Comment