".

Header Ads

ಕೊಲ್ಲೂರು:- ನೆಹರು ಯುವ ಕೇಂದ್ರ ಉಡುಪಿ ಮತ್ತು ನವಶಕ್ತಿ ಮಹಿಳಾ ವೇದಿಕೆ (ರಿ) ಕೊಲ್ಲೂರು :ಸ್ವಾಮಿ ವಿವೇಕಾನಂದರ ಜನ್ಮದಿನಾಚರಣೆ - ರಾಷ್ಟ್ರೀಯ ಯುವ ಸಪ್ತಾಹ ಉದ್ಘಾಟನೆ

 

ನೆಹರು ಯುವ ಕೇಂದ್ರ ಉಡುಪಿ ಮತ್ತು ನವಶಕ್ತಿ ಮಹಿಳಾ ವೇದಿಕೆ (ರಿ) ಕೊಲ್ಲೂರು ವತಿಯಿಂದ ಸ್ವಾಮಿ ವಿವೇಕಾನಂದರ ಜನ್ಮದಿನಾಚರಣೆ ಅಂಗವಾಗಿ ರಾಷ್ಟ್ರೀಯ ಯುವ ಸಪ್ತಾಹ ಕಾರ್ಯಕ್ರಮ ಬುಧವಾರ ಪ್ರಾಥಮಿಕ ಶಾಲಾ ಸಭಾಂಗಣದಲ್ಲಿ  ನಡೆಯಿತು. ಕಾರ್ಯಕ್ರಮವನ್ನು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಗೋಪಾಲಕೃಷ್ಣ ಜಿ.ಬಿ ಉದ್ಘಾಟಿಸಿ ರಾಷ್ಟ್ರ ನಿರ್ಮಾಣದಲ್ಲಿ ಯುವಜನರ ಪಾತ್ರ ಮಹತ್ತರವಾದುದು.ಸ್ವಾಮಿ ವಿವೇಕಾನಂದರ ಆದರ್ಶ ಇಂದಿನ ಯುವ ಜನರಿಗೆ ಸ್ಫೂರ್ತಿಯಾಗಲಿದೆ.


ಇಂದಿನ ಯುವ ಜನಾಂಗವು ಉತ್ತಮವಾದ ದಾರಿಯಲ್ಲಿ ನಡೆದರೆ ಮಾತ್ರ , ಭವಿಷ್ಯದ ಭಾರತವನ್ನು ಸದೃಢವಾಗಿ ಕಟ್ಟಲು ಸಾಧ್ಯ ಎಂದು ಕಿವಿ ಮಾತು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ನವಶಕ್ತಿ ಮಹಿಳಾ ವೇದಿಕೆ ಕೊಲ್ಲೂರು ಇದರ ಅಧ್ಯಕ್ಷರಾದ ಗ್ರೀಷ್ಮಾ ಗಿರಿಧರ ಭಿಡೆ ವಹಿಸಿ ಭಾರತ ಪ್ರಪಂಚದಲ್ಲಿಯೇ ಯುವ ರಾಷ್ಟ್ರವೆಂದು ಕರೆಸಿಕೊಂಡಿದೆ. ಆದರೆ ಈ ಯುವ ಜನತೆ ಸ್ವಾಮಿ ವಿವೇಕಾನಂದರ ವ್ಯಕ್ತಿತ್ವ ಮತ್ತು ಅವರ ಆದರ್ಶವನ್ನು ಜೀವನದಲ್ಲಿ ಅಳವಡಿಸಿಕೊಂಡು ಅವರು ದೇಶದ ದೊಡ್ಡ ಆಸ್ತಿಯಾಗಬಲ್ಲರು ಸ್ವಾಮಿ ವಿವೇಕಾನಂದರು ತಮ್ಮ ಜೀವನದ ಕಡಿಮೆ ಅವಧಿಯಲ್ಲಿ ಮಾಡಿದ ಸಾಧನೆ ಅಪಾರವಾದದ್ದು. ಇದನ್ನು ವಿದ್ಯಾರ್ಥಿಗಳು ಪ್ರೇರಣೆಯಾಗಿಟ್ಟುಕೊಂಡು ದೊಡ್ಡ ಸಾಧನೆ ಮಾಡಬೇಕೆಂದು ತಿಳಿಸಿದರು. 

ಪದವಿ ಪೂರ್ವ ವಿದ್ಯಾರ್ಥಿಗಳಾದ ಕೀರ್ತನ್ ಮತ್ತು ಸುನೀಲ್ ಅನಿಸಿಕೆ ಹಂಚಿಕೊಂಡರು. ಮುಖ್ಯ ಅತಿಥಿಗಳಾಗಿ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾದ ರಾಮ ನಾಯ್ಕ್,  ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರಾದ ಶಾರದಾ ಮತ್ತು ನವಶಕ್ತಿ ಮಹಿಳಾ ವೇದಿಕೆ (ರಿ) ಕೊಲ್ಲೂರು ಇದರ ಪದಾಧಿಕಾರಿಗಳು ಹಾಗೂ ಸರ್ವ ಸದಸ್ಯರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. 

ಕಾರ್ಯದರ್ಶಿ ಜ್ಯೋತಿ ರಾಘವೇಂದ್ರ ಸ್ವಾಗತಿಸಿ. ಶ್ರೀಮತಿ ರಾಧಿಕಾ ರಾವ್ ನಿರೂಪಿಸಿದರು. ಉಪಾಧ್ಯಕ್ಷೆ ರತ್ನ ಧನ್ಯವಾದ ಸಲ್ಲಿಸಿದರು.

Powered by Blogger.