".

Header Ads

ಐಸಿಸಿ ಟೆಸ್ಟ್ ರ್‍ಯಾಂಕಿಂಗ್‌ನಲ್ಲಿ ವಿಶ್ವದ ನಂ.1 ತಂಡ ಟೀಂ ಇಂಡಿಯಾ!


ಎರಡನೇ ಟೆಸ್ಟ್ ಪಂದ್ಯಕ್ಕೆ ಸಿದ್ಧವಾಗುತ್ತಿರುವ ಭಾರತ ತಂಡಕ್ಕೆ ಸಂತಸದ ಸುದ್ದಿ ಸಿಕ್ಕಿದೆ. ಮೊದಲ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾವನ್ನು ಬಗ್ಗುಬಡಿದ ಬಳಿಕ ಭಾರತ ತಂಡ ಐಸಿಸಿ ಟೆಸ್ಟ್ ರ್‍ಯಾಂಕಿಂಗ್‌ನಲ್ಲಿ ಅಗ್ರಸ್ಥಾನಕ್ಕೇರಿದೆ.



 ಟೀಂ ಇಂಡಿಯಾ ಹೊಸ ಇತಿಹಾಸ ನಿರ್ಮಿಸಿ ವಿಶ್ವವನ್ನೇ ಬೆರಗಾಗಿಸಿದೆ. ಐಸಿಸಿ ಇತ್ತೀಚಿನ ಟೆಸ್ಟ್ ರ್‍ಯಾಂಕಿಂಗ್‌ ಬಿಡುಗಡೆ ಮಾಡಿದ್ದು, ಅದರ ಪ್ರಕಾರ ಭಾರತ ಈಗ ವಿಶ್ವದ ನಂ.1 ಟೆಸ್ಟ್ ತಂಡವಾಗಿ ಹೊರಹೊಮ್ಮಿದೆ. ನಾಗ್ಪುರ ಟೆಸ್ಟ್‌ನಲ್ಲಿ ಗೆಲುವಿನ ನಂತರ ಭಾರತ ಈಗ 115 ಅಂಕಗಳನ್ನು ಹೊಂದಿದೆ ಮತ್ತು ಆಸ್ಟ್ರೇಲಿಯಾ ತಂಡ 111 ಅಂಕಗಳೊಂದಿಗೆ ಎರಡನೇ ಸ್ಥಾನಕ್ಕೆ ಕುಸಿದಿದೆ.

ಇದರೊಂದಿಗೆ ಭಾರತ ಕ್ರಿಕೆಟ್ ತಂಡ ಇತಿಹಾಸ ಸೃಷ್ಟಿಸಿದ್ದು, ಅಂತರಾಷ್ಟ್ರೀಯ ಕ್ರಿಕೆಟ್, ಟೆಸ್ಟ್, ಏಕದಿನ ಮತ್ತು ಟಿ20 ಮೂರು ಮಾದರಿಗಳಲ್ಲಿ ವಿಶ್ವದ ನಂ.1 ತಂಡವಾಗಿ ಹೊರಹೊಮ್ಮಿದೆ. ಟೀಂ ಇಂಡಿಯಾ ಪ್ರಸ್ತುತ ಟೆಸ್ಟ್, ಏಕದಿನ ಮತ್ತು ಟಿ20 ಅಂತರಾಷ್ಟ್ರೀಯ ಪಂದ್ಯಗಳಲ್ಲಿ ವಿಶ್ವದ ನಂ.1 ತಂಡವಾಗಿದೆ. ಭಾರತ ಕ್ರಿಕೆಟ್ ತಂಡ ಇದೇ ಮೊದಲ ಬಾರಿಗೆ ಐತಿಹಾಸಿಕ ಸಾಧನೆ ಮಾಡಿದೆ.
Powered by Blogger.