ರೈತ ಸಮುದಾಯಕ್ಕೆ ಗುಡ್ ನ್ಯೂಸ್ :-10 ತಾಸು ವಿದ್ಯುತ್ ನೀಡಲು ರಾಜ್ಯ ಸರ್ಕಾರ ಚಿಂತನೆ - ಇಂಧನ ಸಚಿವ ಸುನೀಲ್ ಕುಮಾರ್
ರಾಜ್ಯದ ರೈತರಿಗೆ ಇಂಧನ ಸಚಿವ ಸುನೀಲ್ ಕುಮಾರ್ ಸಿಹಿಸುದ್ದಿ ನೀಡಿದ್ದು, ರೈತರಿಗೆ 7 ತಾಸು ಬದಲಾಗಿ 10 ತಾಸು ವಿದ್ಯುತ್ ಒದಗಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ಸಚಿವ ಸುನೀಲ್ ಕುಮಾರ್ ತಿಳಿಸಿದ್ದಾರೆ.
'ಕನಕಗಿರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕ.ವಿ.ಪ್ರ.ನಿ.ನಿ ಮತ್ತು ಗು.ವಿ.ಸ.ಕಂ.ನಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನಾ' ಕಾರ್ಯಕ್ರಮವಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಇಂಧನ ಇಲಾಖೆಯು 2030ಕ್ಕೆ ಬೇಕಾಗಿರುವ ಕಾರ್ಯಕ್ರಮ, ಯೋಜನೆಗಳನ್ನು ಈಗಾಗಲೇ ಜಾರಿಗೆ ಮಾಡಲಾಗುತ್ತಿದೆ. ಪರಿಸರ ಸ್ನೇಹಿ ಸೌರಶಕ್ತಿ ಮತ್ತು ಪವನ ಶಕ್ತಿ ಉತ್ಪಾದನಾ ಘಟಕಗಳನ್ನು ಹೆಚ್ಚಿಸಲು ಮುಂದಾಗಿದ್ದೇವೆ. ಇಂಧನ ಇಲಾಖೆಯಲ್ಲಿ ಹೊಸ ರೀತಿಯ ಬದಲಾವಣೆಯಾಗಿದೆ. ಎರಡು ವರ್ಷಗಳ ಅವಧಿಯೊಳಗೆ ರಾಜ್ಯದಲ್ಲಿ 250 ಕ್ಕೂ ಅಧಿಕ ಹೊಸ ವಿದ್ಯುತ್ ಉಪಕೇಂದ್ರಗಳ ಸ್ಥಾಪನೆ ಮತ್ತು ಉನ್ನತೀಕರಣವನ್ನು ವ್ಯಾಪಕವಾಗಿ ಮಾಡಿದ್ದೇವೆ. ವಿದ್ಯುತ್ ಸಂಪರ್ಕ ಇಲ್ಲದ ಮನೆಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರದಿಂದ 'ಹೊಸ ಬೆಳಕು' ಯೋಜನೆಯನ್ನು ಜಾರಿಗೆ ತರಲಾಗಿದೆ. ಸುಟ್ಟು ಹೋದ ಟಿಸಿಗಳನ್ಮು ಬದಲಾವಣೆ ಮಾಡಿಸಿಕೊಳ್ಳಲು 15 ದಿನಗಳ ಕಾಲ ಕಾಯುವುದಲ್ಲದೇ, ತುಂಬಾ ತೊಂದರೆ ಅನುಭವಿಸಬೇಕಾಗಿತ್ತು. ಈ ನಿಟ್ಟಿನಲ್ಲಿ 24 ಗಂಟೆಯೊಳಗೆ ಪರಿಹಾರ ಕ್ರಮ ಕೈಗೊಳ್ಳಲಾಗುತ್ತಿದ್ದು, ರೈತರ ಬೇಡಿಕೆಗಳನ್ನು ಸಹಕಾರಗೊಳಿಸಿದ್ದೇವೆ ಎಂದು ಹೇಳಿದರು
ನಮ್ಮ ಸರ್ಕಾರವು ಅಮೃತ ಜೋತಿ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನರಿಗೆ 75 ಯುನಿಟ್ ವಿದ್ಯುತ್ ಉಚಿತವಾಗಿ ನೀಡುತ್ತಿದೆ. ರಾಜ್ಯದಲ್ಲಿ 6 ಸಾವಿರ ಕಿ.ಮೀ ವಿದ್ಯುತ್ ಲೈನ್ ಹಾಕಲಾಗಿದೆ. ಕೃಷಿಕರ ಪಂಪ್ಸೆಟ್ ಗಳಿಗೆ 7 ಗಂಟೆಗಳ ಕಾಲ ವಿದ್ಯುತ್ ನೀಡಲಾಗುತ್ತಿದ್ದು, 7 ತಾಸು ಬದಲಾಗಿ 10 ತಾಸು ವಿದ್ಯುತ್ ಒದಗಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ,ಇದಕ್ಕಾಗಿ 16 ಸಾವಿರ ಕೋಟಿ ರೂ.ಗಳನ್ನು ಮೀಸಲಿಡಲಾಗಿದೆ. ಕೇಂದ್ರ ಸರ್ಕಾರದ ಯೋಜನೆಗಳನ್ನು ರಾಜ್ಯದಲ್ಲಿ ಸಮರ್ಪಕವಾಗಿ ಅನುಷ್ಠಾನಮಾಡಲಾಗುತ್ತದೆ ಎಂದರು. ರೈತ ಸಮುದಾಯಕ್ಕೆ ಗುಡ್ ನ್ಯೂಸ್ :-10 ತಾಸು ವಿದ್ಯುತ್ ನೀಡಲು ರಾಜ್ಯ ಸರ್ಕಾರ ಚಿಂತನೆ - ಇಂಧನ ಸಚಿವ ಸುನೀಲ್ ಕುಮಾರ್

Post a Comment