ಸಿರಿಯಾ, ಟರ್ಕಿಯಲ್ಲಿ ಪ್ರಬಲ ಭೂಕಂಪನ, 200 ಕ್ಕೂ ಅಧಿಕ ಮಂದಿ ಸಾವು
ಸಿರಿಯಾ ಹಾಗೂ ಆಗ್ನೇಯ ಟರ್ಕಿಯಲ್ಲಿ 7.8 ತೀವ್ರತೆಯ ಪ್ರಬಲ ಭೂಕಂಪ ಇಂದು ಸಂಭವಿಸಿದ್ದು, ಈ ವರೆಗೆ ಸುಮಾರು 200 ಮಂದಿ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಟರ್ಕಿಯಲ್ಲಿ ದುರಂತದಿಂದಾಗಿ 76 ಮಂದಿ ಮೃತಪಟ್ಟಿದ್ದರು, 440 ಮಂದಿ ಗಾಯಗೊಂಡಿದ್ದಾರೆ ಎಂದು ಸರ್ಕಾರ ಹೇಳಿದೆ.
ಸಿರಿಯಾದಲ್ಲಿ ಸರ್ಕಾರದ ನಿಯಂತ್ರಣದಲ್ಲಿರುವ ಪ್ರದೇಶ ಮತ್ತು ಬಂಡುಕೋರ ಬಣದ ನಿಯಂತ್ರಣದಲ್ಲಿರುವ ಪ್ರದೇಶಗಳಲ್ಲಿ 119 ಮಂದಿ ಸಾವಿಗೀಡಾಗಿದ್ದಾರೆ. ಬಂಡುಕೋರರ ಹಿಡಿತದಲ್ಲಿರುವ ವಾಯುವ್ಯ ಸಿರಿಯಾದಲ್ಲಿ ಪರಿಸ್ಥಿತಿ ವಿನಾಶಕಾರಿಯಾಗಿದ್ದು, ಹಲವಾರು ಕಟ್ಟಡಗಳು ನೆಲಸಮಗೊಂಡಿದ್ದು, ಜನರು ಅವಶೇಷಗಳಡಿಯಲ್ಲಿ ಸಿಲುಕಿಕೊಂಡಿದ್ದಾರೆ.
ಈ ದುರಂತವನ್ನು ನಿಭಾಯಿಸಲು ಸಾಧ್ಯವಿರುವ ಎಲ್ಲ ನೆರವು ನೀಡಲು ಸಿದ್ಧವಾಗಿದೆ ಎಂದು ಮೋದಿ ತಿಳಿಸಿದ್ದಾರೆ.

Post a Comment