".

Header Ads

ಟಿ20 ಕ್ರಿಕೆಟ್‌ನಲ್ಲಿ ರೋಹಿತ್ ಶರ್ಮಾ ದಾರಿ ಬಹುತೇಕ ಅಂತ್ಯ, ಈತನೇ ಭವಿಷ್ಯದ ನಾಯಕ - ಬಿಸಿಸಿಐ



ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ)ಯ ಆಯ್ಕೆ ಸಮಿತಿ ಅಧ್ಯಕ್ಷ ಚೇತನ್ ಶರ್ಮಾ ಮೇಲೆ ಖಾಸಗಿ ಸುದ್ದಿ ವಾಹಿನಿಯೊಂದು ರಹಸ್ಯ ಕಾರ್ಯಾಚರಣೆ ನಡೆಸಿದ್ದು, ಈ ವೇಳೆ ಭಾರತ ಕ್ರಿಕೆಟ್ ತಂಡದ ಹಲವು ಆಂತರಿಕ ವಿಚಾರಗಳನ್ನು ಪ್ರಸ್ತಾಪಿಸಿ ವಿಶ್ವಮಟ್ಟದಲ್ಲಿ ಮುಜುಗರ ತಂದಿಟ್ಟಿದ್ದಾರೆ.

 ಝೀ ನ್ಯೂಸ್ ನಡೆಸಿದ ಕುಟುಕು ಕಾರ್ಯಾಚರಣೆಯಲ್ಲಿ ಭಾರತ ಕ್ರಿಕೆಟ್ ತಂಡದಲ್ಲಿ ನಕಲಿ ಫಿಟ್‌ನೆಸ್ ಚುಚ್ಚುಮದ್ದಿನ ಬಳಕೆ, ವಿರಾಟ್ ಕೊಹ್ಲಿ ಮತ್ತು ಸೌರವ್ ಗಂಗೂಲಿ ನಡುವಿನ ಭಿನ್ನಾಭಿಪ್ರಾಯ, ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಬಣಗಳ ವಿಚಾರ, ಆಟಗಾರರನ್ನು ತಂಡದಿಂದ ಕೈಬಿಡುವುದರ ಹಿಂದಿನ ಕಾರಣವನ್ನು ಬಹಿರಂಗಪಡಿಸಿ ಬಿಸಿಸಿಐ ಆಯ್ಕೆ ಸಮಿತಿ ಅಧ್ಯಕ್ಷ ಚೇತನ್ ಶರ್ಮಾ ವಿವಾದ ಮೇಲೆಳೆದುಕೊಂಡಿದ್ದಾರೆ.
 "ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಭವಿಷ್ಯದಲ್ಲಿ ಭಾರತ ತಂಡದ ಖಾಯಂ ನಾಯಕರಾಗಿ ಜವಾಬ್ದಾರಿ ವಹಿಸಿಕೊಳ್ಳುತ್ತಾರೆ. ಇದೇ ವೇಳೆ ಹಾಲಿ ನಾಯಕ ರೋಹಿತ್ ಶರ್ಮಾ ಇನ್ಮುಂದೆ ಭಾರತ ಟಿ20 ತಂಡದ ಭಾಗವಾಗಿರುವುದಿಲ್ಲ.  ಎಂದು ರಹಸ್ಯ ಕ್ಯಾಮೆರಾ ಕಾರ್ಯಾಚರಣೆಯಲ್ಲಿ ಚೇತನ್ ಶರ್ಮಾ ತಿಳಿಸಿದ್ದಾರೆ.
 

Powered by Blogger.