ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತಿದ್ದ ಸಹೋದರರು ಬೇರೆ ಬೇರೆ ಆಸ್ಪತ್ರೆಗಳಿಗೆ ದಾಖಲಾಗಿದ್ದರು. ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ರಾಘವೇಂದ್ರ ದೇವಾಡಿಗ ಗುರುವಾರ ಬೆಳಗ್ಗೆ ಮೃತಪಟ್ಟರೆ, ಸುದ್ದಿ ತಿಳಿದು ಕೆಲವೇ ಗಂಟೆಗಳ ಬಳಿಕ ಅಣ್ಣ ಗಣೇಶ ದೇವಾಡಿಗ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟರು.
ಇಬ್ಬರೂ ಬ್ರಹ್ಮಾವರ ದೇವಾಡಿಗರಬೆಟ್ಟು ರಘುನಾಥ ದೇವಾಡಿಗ ಹಾಗೂ ಸುಮತಿ ದೇವಾಡಿಗ ಇವರ ಪುತ್ರರು. ಇಬ್ಬರೂ ಒಂದೇ ಮನೆಯಲ್ಲಿ ವಾಸಿಸುತ್ತಿದ್ದರು. ಇಬ್ಬರೂ ಕೂಡ ವಾದ್ಯ ಸಂಗೀತದಲ್ಲಿ ಪ್ರಸಿದ್ಧಿ ಪಡೆದವರಾಗಿದ್ದು, ಒಂದೇ ದಿನ ಸಂಗೀತದ ಸ್ವರ ನಿಲ್ಲಿಸಿದ ಸಹೋದರರಿಬ್ಬರ ಸಾವಿಗೆ ಇಡೀ ಗ್ರಾಮವೇ ಮರುಕ ಪಡುತ್ತಿದೆ.
ನೂರಾರು ಮಂದಿ ಅಭಿಮಾನಿಗಳು ಕಲಾವಿದ ಸಹೋದರರ ಅಗಲುವಿಕೆಗೆ ಕಂಬನಿ ಮಿಡಿಯುತಿದ್ದಾರೆ.
Post a Comment